Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-04-2024)

ನಿತ್ಯ ನೀತಿ : ಯಾರ ವಿಷಯದಲ್ಲೂ, ಯಾವ ವಿಷಯದಲ್ಲೂ ಅತಿಯಾದ ಆತ್ಮವಿಶ್ವಾಸ, ನಂಬಿಕೆ, ಪ್ರೀತಿ ಒಳ್ಳೆಯದಲ್ಲ. ಏಕೆಂದರೆ ಯಾರು, ಯಾವಾಗ ಹೇಗೆ ಬದಲಾಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ.

ಪಂಚಾಂಗ : ಭಾನುವಾರ, 28-04-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮೂಲಾ / ಯೋಗ: ಶಿವ / ಕರಣ: ಕೌಲವ

ಸೂರ್ಯೋದಯ : ಬೆ.06.00
ಸೂರ್ಯಾಸ್ತ : 06.34
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿಭವಿಷ್ಯ :
ಮೇಷ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ವೃಷಭ: ಕುಟುಂಬ ಕಲಹ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆಯಿಂದಿರುವುದು ಒಳಿತು.
ಮಿಥುನ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಕಟಕ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡಲಿದೆ.

ಸಿಂಹ: ಹಣದ ವಿಷಯ ದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಮನೆಯ ಜವಾಬ್ದಾರಿ ಪೂರೈಸುವಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲ ಪಡೆಯುತ್ತೀರಿ.
ತುಲಾ: ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ.

ವೃಶ್ಚಿಕ: ಮಡದಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕಾಗಬಹುದು.
ಧನುಸ್ಸು: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳ ಬಹುದು. ಆದ್ದರಿಂದ ಜಾಗ್ರತೆಯಿಂದಿರಿ.

ಮಕರ: ಬಂಧುಗಳಿಂದ ಸಮಸ್ಯೆ ಎದುರಾಗಲಿದೆ. ಹಿತಶತ್ರುಗಳ ಕಾಟ ಹೆಚ್ಚಾಗಲಿದೆ.
ಕುಂಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮೀನ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸದಿರುವುದು ಒಳಿತು.

RELATED ARTICLES

Latest News