Homeಇದೀಗ ಬಂದ ಸುದ್ದಿವೀರಶೈವ-ಲಿಂಗಾಯತರು ಒಂದೇ, ಸಮಾಜದಲ್ಲಿ ಒಡಕು ಮೂಡಿಸುವ ಯತ್ನ ಸರಿಯಲ್ಲ: ಬಿ.ವೈ. ವಿಜಯೇಂದ್ರ

ವೀರಶೈವ-ಲಿಂಗಾಯತರು ಒಂದೇ, ಸಮಾಜದಲ್ಲಿ ಒಡಕು ಮೂಡಿಸುವ ಯತ್ನ ಸರಿಯಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು,ನ.29- ಬಸವಕಲ್ಯಾಣ ಕಾರ್ಯಕ್ರಮದಲ್ಲಿ ತಾವು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ವೀರಶೈವ ಲಿಂಗಾಯತ ಮಹಾಸಭಾ ತೆಗೆದುಕೊಂಡಿರುವ ನಿರ್ಧಾರ ಮತ್ತು ಅದರ ನಿಲುವನ್ನೇ ತಾವು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಿದ್ದಾಗಿ ಅವರು ಹೇಳಿದ್ದಾರೆ. ಮಹಾಸಭಾ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

ವೀರಶೈವ ಮತ್ತು ಲಿಂಗಾಯತರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸಾವಿರಾರು ವರ್ಷಗಳ ಈ ಸಂಬಂಧವನ್ನು ಹಾಳು ಮಾಡುವುದು ಸರಿಯಲ್ಲ. ಕೇವಲ ರಾಜಕೀಯ ಕಾರಣಗಳಿಗಾಗಿ ಕೆಲವರು ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಮುಂದಿಡುತ್ತಿದ್ದು, ಸಮಾಜದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾವಿರಾರು ವರ್ಷಗಳಿಂದ ವೀರಶೈವ ಮತ್ತು ಲಿಂಗಾಯತ ಎಂಬ ಪದಗಳ ನಡುವೆ ವ್ಯತ್ಯಾಸಗಳಿದ್ದರೂ, ಅವುಗಳ ನಡುವಿನ ಸಂಬಂಧಕ್ಕೆ ಎಂದಿಗೂ ಧಕ್ಕೆಯಾಗಿಲ್ಲ. ತಮ ಹೇಳಿಕೆಯಲ್ಲಿ ಯಾವುದೇ ಗೊಂದಲ ಅಥವಾ ಅಸ್ಪಷ್ಟತೆ ಇಲ್ಲ. ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ. ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಅಭಿಪ್ರಾಯಗಳಿಗೆ ತಾತ್ವಿಕವಾಗಿ ವಿರೋಧ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಆದರೆ ವೈಯಕ್ತಿಕವಾಗಿ ಅಭಿಪ್ರಾಯವನ್ನೇ ವ್ಯಕ್ತಪಡಿಸಬಾರದು ಎನ್ನುವುದು ಸರಿಯಲ್ಲ. ಪ್ರತಿಯೊಬ್ಬರೂ ಪರಸ್ಪರರ ಅಭಿಪ್ರಾಯಗಳನ್ನು ಗೌರವಿಸಬೇಕು. ತಮ ಹೇಳಿಕೆಗೆ ವಿರೋಧವಿದ್ದರೆ ತಾತ್ವಿಕವಾಗಿ ವಿರೋಧಿಸಲಿ ಎಂದು ಹೇಳಿದ್ದಾರೆ. ತಾವು ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಎಂಬ ನಂಬಿಕೆ ಹೊಂದಿರುವುದಾಗಿ ಪುನರುಚ್ಚರಿಸಿರುವ ಅವರು, ಇದು ತಮ ವೈಯಕ್ತಿಕ ಅಭಿಪ್ರಾಯವಲ್ಲ; ವೀರಶೈವ ಲಿಂಗಾಯತ ಮಹಾಸಭಾದ ನಿಲುವನ್ನೇ ನಾನು ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

RELATED ARTICLES

Latest News