ನವದೆಹಲಿ, ಅ 29 (ಪಿಟಿಐ) : ಬರುವ ಮೇ 25 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. ದೆಹಲಿಯ ಏಳು ಕ್ಷೇತ್ರಗಳು ಸೇರಿದಂತೆ 57 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ನಾಮನಿರ್ದೇಶನ ಪ್ರಕ್ರಿಯೆಗೆ ಚಾಲನೆ ನೀಡಿ ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.ಅಧಿಸೂಚನೆಯ ಪ್ರಕಾರ, ಮೇ 6 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಮೇ 7 ರಂದು ದಾಖಲೆಗಳ ಪರಿಶೀಲನೆ ನಡೆಯಲಿದೆ.ಮೇ 9 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.
ದೆಹಲಿ ಅಲ್ಲದೆ, ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಆರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಎರಡು ಹಂತದ ಲೋಕಸಭೆ ಚುನಾವಣೆ ಮುಗಿದಿದೆ.