Wednesday, December 24, 2025
Homeರಾಷ್ಟ್ರೀಯಅಯೋಧ್ಯೆ ರಾಮಮಂದಿರಕ್ಕೆ 30 ಕೋಟಿ ಮೌಲ್ಯದ ರಾಮನ ಚಿನ್ನದ ವಿಗ್ರಹ ದಾನ ಮಾಡಿದ ಅನಾಮಧೇಯ ಕನ್ನಡಿಗ

ಅಯೋಧ್ಯೆ ರಾಮಮಂದಿರಕ್ಕೆ 30 ಕೋಟಿ ಮೌಲ್ಯದ ರಾಮನ ಚಿನ್ನದ ವಿಗ್ರಹ ದಾನ ಮಾಡಿದ ಅನಾಮಧೇಯ ಕನ್ನಡಿಗ

Anonymous devotee donates ₹25–30 crore idol to Ram Temple

ಅಯೋಧ್ಯೆ, ಡಿ. 24- ಕರ್ನಾಟಕದ ಅನಾಮಧೇಯ ಭಕ್ತರೊಬ್ಬರು ಅಯೋಧ್ಯೆಯ ರಾಮಮಂದಿರಕ್ಕೆ ಸುಮಾರು 30 ಕೋಟಿ ರೂ.ಮೌಲ್ಯದ ರಾಮನ ಚಿನ್ನದ ಪ್ರತಿಮೆಯನ್ನು ದಾನ ಮಾಡಿದ್ದಾರೆ.ಇದರೊಂದಿಗೆ ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ.

ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ನಿನ್ನೆ ಸಂಜೆ ನಗರಕ್ಕೆ ತರಲಾಗಿದೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲೆ ತಂತ್ರಗಳನ್ನು ಬಳಸಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25 ರಿಂದ 30 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ. ಅನಿಲ್‌ ಮಿಶ್ರಾ, ದಾನಿ ಯಾರೆಂಬುದು ತಿಳಿದಿಲ್ಲ ಎಂದಿದ್ದಾರೆ. ಪ್ರತಿಮೆಯ ತೂಕವನ್ನು ಅಳೆಯಲಾಗುತ್ತಿದೆ, ಆದರೂ ಅದು ಸುಮಾರು ಐದು ಕ್ವಿಂಟಾಲ್‌ಗಳಷ್ಟಿರಬಹುದು ಎಂದಿದ್ದಾರೆ.

ಸಂಪೂರ್ಣ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದೇ 29 ರಿಂದ ಜನವರಿ 2 ರವರೆಗೆ ಆಚರಿಸಲಾಗುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾ ದ್ವಾದಶಿಗೆ ಸಿದ್ಧತೆಗಳು ಪ್ರಾರಂಭವಾಗಿವೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶ್ರೀ ರಾಮ ಅಭಿಷೇಕ, ಶೃಂಗಾರ, ಭೋಗ ಮತ್ತು ಪ್ರಕತ್ಯ ಆರತಿ ಸೇರಿವೆ, ಇವುಗಳನ್ನು ಬೆಳಗ್ಗೆ 9.30 ರಿಂದ ಮಧ್ಯಾಹ್ನ ಆರತಿಯವರೆಗೆ ಗರ್ಭಗುಡಿಯಲ್ಲಿ ನಡೆಸಲಾಗುತ್ತದೆ.

RELATED ARTICLES

Latest News