Friday, November 22, 2024
Homeರಾಷ್ಟ್ರೀಯ | Nationalಎಚ್‌ಸಿಯು ವಿದ್ಯಾರ್ಥಿ ರೋಹಿತ್‌ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಎಚ್‌ಸಿಯು ವಿದ್ಯಾರ್ಥಿ ರೋಹಿತ್‌ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಹೈದರಾಬಾದ್‌,ಮೇ4- ಎಚ್‌ಸಿಯು ವಿದ್ಯಾರ್ಥಿ ರೋಹಿತ್‌ ವೇಮುಲಾ ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಕುರಿತಂತೆ ಪೊಲೀಸ್‌ ಇಲಾಖೆ ಮರು ತನಿಖೆ ನಡೆಸಲು ನಿರ್ಧರಿಸಿದೆ.

ಇತ್ತೀಚೆಗಷ್ಟೇ ಪೊಲೀಸರು ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದು, ಈ ವಿಚಾರದಲ್ಲಿ ವಿವಿ ವಿಸಿ ಹಾಗೂ ಹಲವು ಮುಖಂಡರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ರೋಹಿತ್‌ ಅವರ ತಾಯಿ, ವಿದ್ಯಾರ್ಥಿಗಳು ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯು ಪ್ರಕರಣವನ್ನು ಮರು ತನಿಖೆ ಮಾಡಲು ಈ ನಿರ್ಧಾರ ಕೈಗೊಂಡಿದೆ.

ವೇಮುಲಾ ರೋಹಿತ್‌ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದರು. ಈ ಘಟನೆಯ ಬಗ್ಗೆ ವಿದ್ಯಾರ್ಥಿ ಸಂಘಗಳು ಮತ್ತು ಹೆಚ್‌ಸಿಯು ವಿದ್ಯಾರ್ಥಿಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಕೈಗೊಂಡಿದ್ದರು.

ದೇಶಾದ್ಯಂತ ಹಲವು ರಾಜಕೀಯ ಪಕ್ಷಗಳು ಪ್ರತಿಕ್ರಿಯಿಸಿದ್ದವು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡು ಬಾರಿ ಹೈದರಾಬಾದ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಸೈಬರಾಬಾದ್‌ನ ಗಚಿಬೌಲಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನವೆಂಬರ್‌ 2023ರಲ್ಲಿ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದರು.

ತನಿಖಾಧಿ ಕಾರಿ ಈ ವರ್ಷ ಮಾರ್ಚ್‌ 21ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಇತ್ತೀಚೆಗೆ ಮತ್ತೆ ಎಲ್ಲರಲ್ಲೂ ಆತಂಕ ಶುರುವಾಗಿದೆ. ಡಿಜಿಪಿ ರವಿಗುಪ್ತ ಶುಕ್ರವಾರ ಈ ಪ್ರಕರಣದ ಮರು ತನಿಖೆಗೆ ನಿರ್ಧರಿಸಿದ್ದಾರೆ. ಇದಕ್ಕೆ ಅನುಮತಿ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲಿದ್ದಾರೆ. ರೋಹಿತ್‌ ಆತ್ಮಹತ್ಯೆ ಪ್ರಕರಣದ ಮರು ತನಿಖೆ ಮುಂದುವರಿಯಲಿದೆ ಎಂದು ಡಿಜಿಪಿ ತಿಳಿಸಿದ್ದಾರೆ.

RELATED ARTICLES

Latest News