ಬೆಂಗಳೂರು,ಮೇ8- ಕಳೆದ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ನಡೆದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ-1ರ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯು ಬೆಳಗ್ಗೆ 10.30ಕ್ಕೆ ಫಲಿತಾಂಶವನ್ನು ಪ್ರಕಟಿಸಲಿದ್ದು, ಗುರುವಾರ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಅಧಿ ಕೃತ ವೆಬ್‌ಸೈಟ್ ಹೊರತುಪಡಿಸಿ ಖಾಸಗಿ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಫಲಿತಾಂಶವನ್ನು ವಿದ್ಯಾರ್ಥಿಗಳು ಇಲ್ಲವೇ ಪೋಷಕರು ಖಾತ್ರಿ ಮಾಡಿಕೊಳ್ಳಬಾರದು. ತಪ್ಪು ಮಾಹಿತಿ ನೀಡಿದರೆ ಅಂತಹ ವೆಬ್‌ಸೈಟ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಕಳೆದ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 4,41,910 ಬಾಲಕರು, 4,28,058 ಬಾಲಕಿಯರು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8,69,968 ವಿದ್ಯಾರ್ಥಿಗಳು ಹಾಜರಾಗಿದ್ದರು.
ವಿದ್ಯಾರ್ಥಿಗಳು ಅಧಿ ಕೃತ ವೆಬ್‌ಸೈಟ್ KSEAB ಅಧಿ ಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು Karresults.nic.in ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.