Monday, November 25, 2024
Homeರಾಷ್ಟ್ರೀಯ | Nationalಸಿಬ್ಬಂದಿ ಸಾಮೂಹಿಕ ರಜೆ, 86ಕ್ಕೂ ಹೆಚ್ಚು ಏರ್‌ ಇಂಡಿಯಾ ವಿಮಾನಗಳ ಹಾರಾಟ ರದ್ದು

ಸಿಬ್ಬಂದಿ ಸಾಮೂಹಿಕ ರಜೆ, 86ಕ್ಕೂ ಹೆಚ್ಚು ಏರ್‌ ಇಂಡಿಯಾ ವಿಮಾನಗಳ ಹಾರಾಟ ರದ್ದು

ನವದೆಹಲಿ,ಮೇ8- ಅನಾರೋಗ್ಯದ ಕಾರಣ ನೀಡಿ ಏರ್‌ ಇಂಡಿಯಾ ಎಕ್ಸ್ ಪ್ರೆಸ್‌ ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್‌ ಇಂಡಿಯಾದ 86ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ.

ಸುಮಾರು 300 ಹಿರಿಯ ಕ್ಯಾಬಿನ್‌ ಸಿಬ್ಬಂದಿ ಕೊನೆಯ ಕ್ಷಣದಲ್ಲಿ ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ. ಹೀಗಾಗಿ ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ.

ಸಂಬಳದ ವಿಚಾರದಲ್ಲಿ ಅಸಮಾಧಾನ ಹೊಂದಿರುವ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ನೋಟಿಸ್‌ ನೀಡದೇ ಕೆಲಸಕ್ಕೆ ಗೈರಾಗಿದ್ದಾರೆ. ಅನಾರೋಗ್ಯ ಕಾರಣ ನೀಡಿ ಸಾಮೂಹಿಕವಾಗಿ ಸಿಬ್ಬಂದಿ ರಜೆ ಹಾಕಿದ್ದಾರೆ.

ಈ ಅನಿರೀಕ್ಷಿತ ಅಡಚಣೆಗಾಗಿ ನಾವು ನಮ್ಮ ಅತಿಥಿಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಈಗ ಎದುರಾಗಿರುವ ಪರಿಸ್ಥಿತಿಯು, ಇದುವರೆಗೆ ನಾವು ಒದಗಿಸಿರುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ.
ವಿಮಾನ ರದ್ದತಿಯಿಂದ ತೊಂದರೆ ಅನುಭವಿಸುತ್ತಿರುವ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುವುದು. ಪ್ರಯಾಣಕ್ಕೆ ದಿನಾಂಕವನ್ನು ಮರು ಹೊಂದಾಣಿಕೆ ಮಾಡಿಕೊಡಲಾಗುವುದು ಎಂದು ಏರ್‌ಲೈನ್‌್ಸ ತಿಳಿಸಿದೆ.

RELATED ARTICLES

Latest News