ತರೀಕೆರೆ,ಡಿ.26- ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.ಮೃತಪಟ್ಟವರನ್ನು ಮುಂಡ್ರೆ ಗ್ರಾಮದ ಶಶಿಕುಮಾರ್ (28) ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಪ್ರೆತಮ್ ನಾಯ್ಕ (16) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಮುಂಡ್ರೆ ಗ್ರಾಮದಿಂದ ಕುಡ್ಲೂರು ಗೇಟ್ ಕಡೆಗೆ ನಿನ್ನೆ ಬೆಳಗ್ಗೆ 4.30ರ ಸುಮಾರಿನಲ್ಲಿ ಇವರಿಬ್ಬರೂ ನೀಲಗಿರಿ ಕಟ್ಟಿಗೆಗಳನ್ನು ತುಂಬಿಕೊಂಡು ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಉಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಶಶಿಕುಮಾರ್ ಮತ್ತು ಪ್ರೆತಮ್ ನಾಯ್ಕ ರವರ ಪಾರ್ಥೀವ ಶರೀರವನ್ನು ತರೀಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಬಗ್ಗೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
