Friday, December 26, 2025
Homeರಾಜಕೀಯರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಿಂದ ದೂರ ಉಳಿದ ಡಿಕೆಶಿ, ಕುತೂಹಲ ಕೆರಳಿಸಿದೆ ನಡೆ

ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಿಂದ ದೂರ ಉಳಿದ ಡಿಕೆಶಿ, ಕುತೂಹಲ ಕೆರಳಿಸಿದೆ ನಡೆ

DK Shivakumar's absence from the National Executive Committee meeting

ಬೆಂಗಳೂರು, ಡಿ.26- ಬೆಂಗಳೂರು, ಡಿ.26- ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್‌‍ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಹ್ವಾನಿತರಾಗಿ, ಇಂದು ದೆಹಲಿಗೆ ತೆರಳಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಭೆಯಿಂದ ದೂರ ಉಳಿಯುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ಏಕಾಂಗಿಯಾಗಿ ದೆಹಲಿಗೆ ತೆರಳುತ್ತಿರುವುದರಿಂದ ಅಧಿಕಾರ ಹಂಚಿಕೆಯ ಪ್ರಹಸನ ತಾರ್ಕಿಕ ಅಂತ್ಯ ಕಾಣಬಹುದು ಎಂಬ ನಿರೀಕ್ಷೆಗಳು ಗರಿಗೆದರಿವೆ. ಕಳೆದ ವಾರ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳಿದ್ದರು. ಆದರೆ ಆ ಸಂದರ್ಭದಲ್ಲಿ ಈ ರಾಷ್ಟ್ರೀಯ ಮಟ್ಟದ ಯಾವ ನಾಯಕರನ್ನೂ ಭೇಟಿ ಮಾಡದೆ ಬರಿ ಕೈಯಲ್ಲಿ ವಾಪಸ್‌‍ ಬಂದಿದ್ದರು.

ಇದನ್ನು ಡಿ.ಕೆ.ಶಿವಕುಮಾರ್‌ ಪಕ್ಷದ ನಾಯಕ ವಿರುದ್ಧದ ಮುನಿಸಿ ಎಂದು ಭಾವಿಸಲಾಗಿತ್ತು. ಬೆಂಗಳೂರಿಗೆ ಬಂದ ಬಳಿಕ ಇಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ ಹಕ್ಕೊತ್ತಾಯವನ್ನು ಮಂಡಿಸಿದ್ದರು. ಮುಖ್ಯಮಂತ್ರಿ ಹುದ್ದೆ ತಮಗೆ ಸಿಗಲೇಬೇಕು ಎಂಬುದು ಡಿ.ಕೆ.ಶಿವಕುಮಾರ್‌ ಪಟ್ಟು ಹಿಡಿದಿದ್ದರು.

ಅಧಿಕಾರ ಹಂಚಿಕೆಯ ಸಂಬಂಧಪಟ್ಟಂತೆ ಹೈಕಮಾಂಡ್‌ ನಿರ್ಧಾರಗಳಿಗೆ ತಾವು ಬದ್ಧ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ತಣ್ಣಗೆ ಪ್ರತಿಕ್ರಿಯಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನಾಯಕತ್ವದ ಗೊಂದಲಗಳನ್ನು ಸೃಷ್ಟಿ ಮಾಡಿಕೊಂಡಿರುವವರು ರಾಜ್ಯದ ನಾಯಕರು. ಅವರೇ ಬಗೆಹರಿಸಿಕೊಳ್ಳಲಿ. ಈ ವಿಷಯವಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಅದರ ಹೊರತಾಗಿಯೂ ಡಿ.ಕೆ.ಶಿವಕುಮಾರ್‌ ಬಣ ಹೈಕಮಾಂಡ್‌ ಮಧ್ಯ ಪ್ರವೇಶ ಮಾಡಿ ನಾಯಕತ್ವದ ಗೊಂದಲಗಳನ್ನು ಬಗೆಹರಿಸಬೇಕು ಎಂದು ಪ್ರತಿಪಾದಿಸುತ್ತಲೇ ಇದೆ.
ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಏಕಾಂಗಿಯಾಗಿ ದೆಹಲಿಗೆ ತೆರಳುತ್ತಿರುವುದರಿಂದ, ಪಕ್ಷದ ವರಿಷ್ಠ ನಾಯಕರ ಜೊತೆ ನಾಯಕತ್ವ ವಿಚಾರವಾಗಿ ಚರ್ಚೆ ಮಾಡುವ ಸದಾವಕಾಶ ದೊರೆತಂತಾಗಿದೆ.

ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರ ಜೊತೆ ಚರ್ಚೆ ಮಾಡುವ ಸಾಧ್ಯತೆ ಇದೆ.ಕಳೆದ ತಿಂಗಳು ರಾಹುಲ್‌ ಗಾಂಧಿಯವರು ಡಿ.ಕೆ.ಶಿವಕುಮಾರ್‌ ಭೇಟಿಗೆ ಸಮಯ ನೀಡಲು ಹಿಂದೇಟು ಹಾಕಿದ್ದರು. ಅದೇ ವೇಳೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಡಿಕೆ ಶಿವಕುಮಾರ್‌ ಒಂದು ತಿಂಗಳ ಅಂತರದಲ್ಲಿ ನಾಲ್ಕು ಬಾರಿ ದೆಹಲಿಗೆ ತೆರಳಿದ್ದಾರೆ. ಆದರೆ ಒಮೆಯೂ ರಾಹುಲ್‌ ಗಾಂಧಿ ಭೇಟಿ ಸಾಧ್ಯವಾಗಿಲ್ಲ. ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸುವ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಭೇಟಿ ಆಗುವುದಾದರೆ, ಅದು ಡಿ.ಕೆ.ಶಿವಕುಮಾರ್‌ ಬಣವನ್ನು ಮತ್ತಷ್ಟು ಕೆರಳಿಸುವ ಸಾಧ್ಯತೆ ಇದೆ.

ಅಧಿಕಾರ ಹಂಚಿಕೆಯ ವಿಚಾರವಾಗಿ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದು ಹೇಳುತ್ತಲೇ ಡಿ.ಕೆ.ಶಿವಕುಮಾರ್‌, ಕಾಲ-ಕಾಲಕ್ಕೆ ತಮ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಸದ್ಯಕ್ಕಂತೂ ನಾಯಕತ್ವ ಬಿಟ್ಟು ಕೊಡುವ ಯಾವ ಲಕ್ಷಣಗಳೂ ಇಲ್ಲ. ಈಗ ದೆಹಲಿಗೆ ತೆರಳುವ ಸಿದ್ದರಾಮಯ್ಯ ಅವರು ವರಿಷ್ಠರ ಜೊತೆ ಚರ್ಚಿಸಿ ನಾಯಕತ್ವಕ್ಕೆ ಸಂಬಂಧಪಟ್ಟಂತೆ ತಮ ಪರವಾಗಿ ನಿರ್ಣಯ ಕೈಗೊಳ್ಳಲು ಒತ್ತಡ ಹಾಕಬಹುದು ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಪ್ರಮುಖವಾಗಿ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ತಿದ್ದುಪಡಿಗಳ ಬಗ್ಗೆ ಚರ್ಚೆಯಾಗಲಿದೆ. ಸಭೆಗೆ ಆರಂಭದಲ್ಲಿ ಸಿದ್ದರಾಮಯ್ಯ ತಮಗೆ ಆಹ್ವಾನ ಇಲ್ಲ ಎಂದು ಹೇಳಿದ್ದರು. ಆದರೆ ಹೈಕಮಾಂಡ್‌, ಪಕ್ಷ ಆಡಳಿತವಿರುವ ಎಲ್ಲಾ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಸೂಚನೆ ನೀಡಿದೆ. ಅದರಂತೆ ಕರ್ನಾಟಕ, ಹಿಮಾಚಲಪ್ರದೇಶ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುತ್ತಿದ್ದಾರೆ.

ಪ್ರದೇಶ ಕಾಂಗ್ರೆಸ್‌‍ ಅಧ್ಯಕ್ಷರಿಗೆ ಈ ಸಭೆಯಲ್ಲಿ ಭಾಗವಹಿಸಲು ಆಹ್ವಾನ ಇಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ನಿನ್ನೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಉದ್ಯೋಗ ಖಾತ್ರಿ ವಿಚಾರವಾಗಿ ತಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ಜೊತೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ತಮ ಒತ್ತಾಯವನ್ನು ಮಂಡಿಸಿದ್ದರು.

RELATED ARTICLES

Latest News