ಜೈಪುರ, ಮೇ 13- ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದು ಆತಮಕ ಸೃಷ್ಠಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಕೂಡಲೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶಾಲೆ ಪ್ರವೇಶ ಮಾಡಲು ಬಿಡದೆ ಬಾಂಬ್ ತಪಾಸಣಾ ಮತ್ತು ಶ್ವಾನ ದಳಗಳೊಂದಿಗೆ ಪೊಲೀಸ್ ತಂಡಗಳು ಆಗಮಿಸಿ ಪರಿಶೀಲನೆ ನಡೆಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ 5 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ತಪಾಸಣೆ ನಂತರ ಇದು ಹುಸಿ ಬೆದರಿಕೆ ಎಂದು ಗೊತ್ತಾಗಿದೆ ಎಮದು ಜೈಪುರ ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ ತಿಳಿಸಿದ್ದಾರೆ.
ಇಮೇಲ್ ಮೂಲಕ ಬೆದರಿಕೆಯನ್ನುಕಳುಹಿಸುವವರನ್ನು ಗುರುತಿಸಲು ತಂಡ ಪ್ರಯತ್ನಿಸುತ್ತಿದೆ ,ಮಕ್ಕಳು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.