ವಿಶ್ವಸಂಸ್ಥೆ, ಮೇ 14 (ಪಿಟಿಐ) ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡುವ ಭಾರತೀಯ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದಾಗ ಗಾಜಾದಲ್ಲಿ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡುವ ಭಾರತೀಯ ಸಿಬ್ಬಂದಿಯೊಬ್ಬರು ಕೊಲ್ಲಲ್ಪಟ್ಟರು ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ ಸದಸ್ಯರಾಗಿದ್ದರು. ಮಾತ್ರವಲ್ಲ ಅವರು ಭಾರತೀಯ ಸೇನೆಯ ಮಾಜಿ ಸಿಬ್ಬಂದಿಯಾಗಿದ್ದರು ಎಂದು ತಿಳಿದುಬಂದಿದ್ದರೂ ಅವರ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
ವಿಶ್ವಸಂಸ್ಥೆ ಸಿಬ್ಬಂದಿ ಮೇಲಿನ ಎಲ್ಲಾ ದಾಳಿಗಳನ್ನು ಗುಟೆರಸ್ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್ ಹಕ್ ಅವರು ಹೇಳಿಕೆ ನೀಡಿದ್ದಾರೆ.
ಗಾಜಾದಲ್ಲಿನ ಸಂಘರ್ಷವು ನಾಗರಿಕರ ಮೇಲೆ ಮಾತ್ರವಲ್ಲದೆ ಮಾನವೀಯ ಕೆಲಸಗಾರರ ಮೇಲೂ ಭಾರಿ ನಷ್ಟವನ್ನು ಮುಂದುವರೆಸುತ್ತಿರುವುದರಿಂದ – ತಕ್ಷಣವೇ ಮಾನವೀಯ ಕದನ ವಿರಾಮಕ್ಕಾಗಿ ಮತ್ತು ಎಲ್ಲಾ ಒತ್ತೆಯಾಳುಗಳ ಬಿಡುಗಡೆಗಾಗಿ ಪ್ರಧಾನ ಕಾರ್ಯದರ್ಶಿ ತಮ ತುರ್ತು ಮನವಿಯನ್ನು ಪುನರುಚ್ಚರಿಸಿದ್ದಾರೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
ಎಕ್‌್ಸನಲ್ಲಿನ ಪೋಸ್ಟ್‌ನಲ್ಲಿ, ಗುಟೆರೆಸ್ ಅವರುವಿಶ್ವಸಂಸ್ಥೆ ವಾಹನವನ್ನು ಗಾಜಾದಲ್ಲಿ ಹೊಡೆದುರುಳಿಸಲಾಯಿತು, ನಮ ಸಹೋದ್ಯೋಗಿಗಳಲ್ಲಿ ಒಬ್ಬರು ಸಾವನ್ನಪ್ಪಿ ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.