ಕೋಲ್ಕತ್ತಾ, ಮೇ 19- ಪಶ್ಚಿಮ ಬಂಗಾಳದ ಸಂದೇಶಖಾಲಿ ಪ್ರದೇಶದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಟಿಎಂಸಿ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ಬಾಲಕಿಯ ತಾಯಿ ನೀಡಿರುವ ದೂರಿನ ಮೇಲೆ ಆರೋಪಿಯನ್ನು ಬಂದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ .ಕೋಲ್ಕತ್ತಾದಿಂದ ಸುಮಾರು 100 ಕಿಮೀ ದೂರದಲ್ಲಿರುವ ಸುಂದರಬನ್‌್ಸನ ಗಡಿಯಲ್ಲಿರುವ ಇದೇ ಸಂದೇಶ್‌ಖಾಲಿ ಪ್ರದೇಶದಲ್ಲಿ ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಆನತ ಬೆಂಬಲಿಗರ ನಡೆಸಿರುವ ಲೈಂಗಿಕ ದೌರ್ಜನ್ಯ,ಭೂಕಬಳಿಕೆ ಘಟನೆಯಿಂದ ಭಾರಿ ಪ್ರತಿಭಟನೆಗಳಿಂದ ಕುದಿಯುತ್ತಿತ್ತು.
ಮತ್ತೆ ಈಗ ಟಿಎಂಸಿ ಕಾರ್ಯಕರ್ತ ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ್ದು , ತಪ್ಪಿಸಿಕೊಂಡು ಸಹಾಯಕ್ಕಾಗಿ ಕೂಗಲು ಪ್ರಾರಂಭಿಸಿದಳು ನೆರೆಹೊರೆಯವರು ಹೊರಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ.
ವಿಷಯ ತಿಳಿದ ಪೊಲೀಸರು ಕಳೆದ ರಾತ್ರಿಯೇ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.ವಿಚಾರಣೆ ನಡೆಸಲಾಗುತ್ತಿದೆ ಎಂದು ಬಸಿರ್‌ಹತ್ ಪೊಲೀಸ್ ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದ್ದಾ