Thursday, August 21, 2025
Homeಬೆಂಗಳೂರುಬೆಂಗಳೂರು : ಚಾಕೊಲೆಟ್‌ ಆಸೆ ತೋರಿಸಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಸೆಕ್ಯೂರಿಟಿ...

ಬೆಂಗಳೂರು : ಚಾಕೊಲೆಟ್‌ ಆಸೆ ತೋರಿಸಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಸೆಕ್ಯೂರಿಟಿ ಗಾರ್ಡ್‌

ಬೆಂಗಳೂರು, ಮೇ 19- ಚಾಕೊಲೆಟ್‌ ಕೊಡಿಸುವುದಾಗಿ ಆಸೆ ತೋರಿಸಿ ಕರೆದೊಯ್ದು 10 ವರ್ಷದ ಬಾಲಕಿ ಮೇಲೆ ಸೆಕ್ಯೂರಿಟಿ ಗಾರ್ಡ್‌ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಿನ್ನೆ ಹೆಬ್ಬಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಬಿಹಾರಿ ಮೂಲದ ಸೆಕ್ಯೂರಿಟಿ ಗಾರ್ಡ್‌ ರಾಜೇಶ್‌ (55)ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ನಾಗೇನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ರಾಜೇಶ್‌ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ.

ನಿನ್ನೆ ಸಂಜೆ ಅಪಾರ್ಟ್‌ಮೆಂಟ್‌ ಸಮೀಪದ ಮನೆಯ ಬಾಲಕಿಗೆ ಆರೋಪಿ ಚಾಕೊಲೆಟ್‌ ಕೊಡಿಸುವುದಾಗಿ ಆಸೆ ತೋರಿಸಿ ಶೌಚಾಲಯದ ಬಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News