ಆಗ್ರಾ,ಮೇ19- ಉತ್ತರಪ್ರದೇಶದ ಆಗ್ರಾದಲ್ಲಿ ಶೂ ವ್ಯಾಪಾರಿ ಮತ್ತು ಆತನ ಸಂಬಂಧಿತ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 40 ಕೋಟಿ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಇದುವರೆಗೆ 40 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ನಗದು ಎಣಿಕೆ ಕಾರ್ಯ ನಡೆಯುತ್ತಿದ್ದು, ಇದರ ಮೊತ್ತವು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಶೂ ವ್ಯಾಪಾರಿಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಯಿತು. ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಗಿದೆ. 500 ರೂ. ಮುಖಬೆಲೆಯ ನೋಟುಗಳ ಹಲವಾರು ಬಂಡಲ್‌ಗಳನ್ನು ಪಾದರಕ್ಷೆ ಕಂಪನಿಯ ಮಾಲೀಕನ ನಿವಾಸದಲ್ಲಿ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರ ಎಣಿಕೆ ಕಾರ್ಯದಲ್ಲಿ ತೊಡಗಿದ್ದು, ನಗದಿನ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.