ನಿತ್ಯ ನೀತಿ : ದುರಾಸೆ ಮನುಷ್ಯನ ದೊಡ್ಡ ಶತ್ರು. ದುರಾಸೆ ಇರುವ ವ್ಯಕ್ತಿ ಬದುಕಿನಲ್ಲಿ ಎಂದಿಗೂ ಯಶಸ್ಸು ಸಾಧಿಸಲು ಸಾಧ್ಯವಿಲ್ಲ.
ಪಂಚಾಂಗ : ಬುಧವಾರ, 22-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಸ್ವಾತಿ / ಯೋಗ: ವರೀಯಾನ್ / ಕರಣ: ಗರಜೆ
ಸೂರ್ಯೋದಯ ; ಬೆ.05.53
ಸೂರ್ಯಾಸ್ತ : 06.40
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00
ರಾಶಿಭವಿಷ್ಯ :
ಮೇಷ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.
ವೃಷಭ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಮಿಥುನ:ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಕಟಕ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗು ವುದು. ಭಾವನೆಗಳಿಗೆ ಪೆಟ್ಟು ಬೀಳಲಿದೆ.
ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಕನ್ಯಾ: ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
ತುಲಾ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ.
ವೃಶ್ಚಿಕ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ.
ಧನುಸ್ಸು: ಭೂ ವ್ಯವಹಾರ ದಲ್ಲಿ ತೊಡಗಿಕೊಂಡ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.
ಮಕರ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.
ಕುಂಭ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.
ಮೀನ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.