Monday, December 29, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-12-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-12-2025)

Today's Horoscope

ನಿತ್ಯ ನೀತಿ : ಎಲ್ಲಾ ಗೊತ್ತಿದ್ದು, ಗೊತ್ತಿಲ್ಲದಂತೆ ಇದ್ದು ಬಿಡು, ಅರ್ಥಮಾಡಿಕೊಂಡವರು ಜೊತೆಯುಳಿಯುತ್ತಾರೆ, ಅನುಮಾನ ಪಟ್ಟವರು ದೂರಸರಿದು ಹೋಗುತ್ತಾರೆ..!!

ಪಂಚಾಂಗ : ಸೋಮವಾರ, 29-12-2025

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಶುಕ್ಲ / ತಿಥಿ: ನವಮಿ / ನಕ್ಷತ್ರ: ರೇವತಿ/ಅಶ್ವಿನಿ / ಯೋಗ: ವರಿಘ / ಕರಣ: ತೈತಿಲ
ಸೂರ್ಯೋದಯ – ಬೆ.06.41
ಸೂರ್ಯಾಸ್ತ – 6.03
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :

ಮೇಷ: ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆ ಯಾಗುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ವೃಷಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮಿಥುನ: ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.

ಕಟಕ: ಸಮಯವನ್ನು ಸರಿಯಾಗಿ ಬಳಸಿಕೊಂಡು ಬುದ್ಧಿವಂತಿಕೆಯಿಂದ ಹಣ ಹೂಡಿಕೆ ಮಾಡಬೇಕಾಗುತ್ತದೆ.
ಸಿಂಹ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಕನ್ಯಾ: ಸ್ನೇಹಿತರಿಂದ ಅಚ್ಚರಿಯ ಉಡುಗೊರೆ ಸಿಗಲಿದೆ. ನಿರ್ಗತಿಕರಿಗೆ ಸಹಾಯ ಮಾಡಿ.

ತುಲಾ: ವಿದ್ಯಾರ್ಥಿಗಳು ಸ್ಪರ್ಧಾ ತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಲು ಉತ್ತಮ ದಿನ.
ವೃಶ್ಚಿಕ: ಮನೆಯಲ್ಲಿ ಮಂಗಳಕರ ಕಾರ್ಯಗಳನ್ನು ಮಾಡುವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
ಧನುಸ್ಸು: ಸಾಲ ಮಾಡುವ ಮುನ್ನ ನಿಮ್ಮ ಸಾಮರ್ಥ್ಯ ಏನೆಂಬುದನ್ನು ತಿಳಿದು ಮುಂದೆ ಹೆಜ್ಜೆ ಇಟ್ಟರೆ ಒಳಿತು.

ಮಕರ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಕುಂಭ: ಅನೇಕ ಸಮಸ್ಯೆ ಗಳ ನಡುವೆಯೂ ವ್ಯಾಪಾರ ಕ್ಷೇತ್ರದಲ್ಲಿ ಮುಂದುವರಿಯುತ್ತೀರಿ.
ಮೀನ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.

RELATED ARTICLES

Latest News