Friday, November 22, 2024
Homeರಾಷ್ಟ್ರೀಯ | Nationalಮೋದಿ ಹತ್ಯೆ ಮಾಡುವುದಾಗಿ ಎನ್‌ಐಎ ಕಚೇರಿಗೆ ಬೆದರಿಕೆ ಕರೆ

ಮೋದಿ ಹತ್ಯೆ ಮಾಡುವುದಾಗಿ ಎನ್‌ಐಎ ಕಚೇರಿಗೆ ಬೆದರಿಕೆ ಕರೆ

ಚೆನ್ನೈ,ಮೇ23- ರಾಜಧಾನಿ ಚೆನ್ನೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ನರೇಂದ್ರಮೋದಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಅಪರಿಚಿತ ವ್ಯಕ್ತಿ ಇಂದು ಬೆಳಿಗ್ಗೆ ಪುರಸೈವಾಕಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎನ್‌ಐಎ ಕಚೇರಿಗೆ ದೂರವಾಣಿ ಕರೆ ಮಾಡಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ಮೋದಿ ಅವರನ್ನು ಕೊಲ್ಲುವುದಾಗಿ ಹೇಳಿದ್ದಾನೆ. ಈ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ತನಿಖೆ ಕೈಗೊಂಡಿರುವ ಸೈಬರ್‌ ಅಪರಾಧ ವಿಭಾಗದ ಪೊಲೀಸರು, ಯಾವ ಪ್ರದೇಶದಿಂದ ಬೆದರಿಕೆ ಕರೆ ಬಂದಿದೆ, ಯಾವ ಸಿಮ್‌ ಕಾರ್ಡ್‌ ಬಳಸಲಾಗಿದೆ ಎಂಬೆಲ್ಲಾ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News