ಕೋಲ್ಕತ್ತಾ, ಮೇ 24 – ರಾಜ್ಯದ ಪುರ್ಬಾ ಮೇದಿನಿಪುರ್ ಜಿಲ್ಲೆಯ ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಲ್ಲಿ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದ್ದಾರೆ.
ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಕ್ರಮ ಕೈಗೊಂಡ ವರದಿಯನ್ನು ಅವರಿಗೆ ಸಲ್ಲಿಸುವಂತೆ ಬೋಸ್ ಬ್ಯಾನರ್ಜಿಗೆ ಸೂಚಿಸಿದ್ದಾರೆ ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ.
ಇಂತಹ ಹಿಂಸಾಚಾರ ಕೊನೆಗೊಳಿಸುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆಯ ನಿಯತಾಂಕಗಳೊಳಗೆ ಎಲಾಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಂದಿಗ್ರಾಮದಲ್ಲಿ ಸರ್ಕಾರ ಪ್ರಾಯೋಜಿತ ಹಿಂಸಾಚಾರ ಎಂದು ಟೀಕಿಸಿ ,ಯಾವುದೇ ಸಾಂವಿಧಾನಿಕ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಅನುಸರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿ ಸಚಿವಾಲಯಕ್ಕೆ ಪತ್ರ ಕಳುಹಿಸಿದ್ದಾರೆ.
ಭಾರತದ ಸಂವಿಧಾನದ 167 ನೇ ವಿಧಿಯ ಅಡಿಯಲ್ಲಿ ಅವರು ಕಡ್ಡಾಯವಾಗಿ ವರದಿ ಮಾಡಬೇಕಾಗಿರುವುದರಿಂದ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಮತ್ತು ಕ್ರಮ ಕೈಗೊಂಡ ವರದಿಯನ್ನು ತಕ್ಷಣವೇ ಅವರಿಗೆ ಕಳುಹಿಸುವಂತೆ ಅವರು ಬ್ಯಾನರ್ಜಿಗೆ ಸೂಚಿಸಿದರು.
ಕಳೆದ ಬುಧವಾರ ರಾತ್ರಿ ನಂದಿಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮಹಿಳಾ ಬಿಜೆಪಿ ಕಾರ್ಯಕರ್ತೆಯೊಬ್ಬರು ಹತ್ಯೆಗೀಡಾಗಿದ್ದು, ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಮ್ಲುಕ್ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಮತ್ತು ಬಂಗಾಳದ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿಯ ಹಿತ್ತಲು ಆಡಳಿತ ಪಕ್ಷ ಟಿಎಂಸಿ ಮುಂದಾಗಿದೆ ಈ ಪ್ರದೇಶದಲ್ಲಿ ನಾಳೆ ಮತದಾನ ನಡೆಯಲಿದೆ.
ಬುಧವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ದಾಳಿಯಲ್ಲಿ ರಥಿಬಾಲಾ ಅವರ ಪುತ್ರ ಸಂಜಯ್ ಮತ್ತು ಇತರ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು, ಕೇಂದ್ರ ಪಡೆಗಳು ಮತ್ತು ಆರ್‌ಎಎಫ್ ಸಿಬ್ಬಂದಿ ಗುಂಪನ್ನು ಚದುರಿಸಲು ಲಾಠಿ ಚಾರ್ಜ್ ಮಾಡಬೇಕಾಯಿತು. ಆರೋಪಿ ಹತ್ಯೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದು ಗೊತ್ತಾಗಿದೆ.