Monday, November 25, 2024
Homeರಾಷ್ಟ್ರೀಯ | Nationalದೆಹಲಿಯಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ನಡುವೆ ಮತದಾನ

ದೆಹಲಿಯಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ನಡುವೆ ಮತದಾನ

ನವದೆಹಲಿ, ಮೇ 25 (ಪಿಟಿಐ) ಇಂದು ನಡೆಯುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿ ಲೋಕಸಭೆ ಚುನಾವಣೆಗೆ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ.ದೆಹಲಿ ಪೊಲೀಸರು ದಢವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದು, ಶಾಂತಿಯುತ, ಮುಕ್ತ ಮತ್ತು ನ್ಯಾಯಸಮತ ಮತದಾನವನ್ನು ಖಚಿತಪಡಿಸಿಕೊಳ್ಳುವಂತೆ ನೋಡಿಕೊಳ್ಳಲು 60,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಹರಿಯಾಣದ ಗಡಿ ಭಾಗಗಳಲ್ಲಿ ನಗರ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.ಆಯಕಟ್ಟಿನ ಪ್ರದೇಶಗಳಲ್ಲಿ ಡ್ರೋನ್‌ಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳ ಜೊತೆಗೆ ಉತ್ತರಾಖಂಡ, ರಾಜಸ್ಥಾನ ಮತ್ತು ಮಧ್ಯಪ್ರದೇಶದಿಂದ ಅರೆಸೈನಿಕ ಪಡೆಗಳ 51 ಕಂಪನಿಗಳು ಮತ್ತು 13,500 ಗಹ ರಕ್ಷಕರು ಭದ್ರತಾ ವ್ಯವಸ್ಥೆಗೆ ನಿಯೋಜನೆ ಮಾಡಲಾಗಿದೆ.

ಸಾರ್ವತ್ರಿಕ ಚುನಾವಣೆಯ ಆರನೇ ಹಂತದಲ್ಲಿ ದೆಹಲಿಯ ಎಲ್ಲಾ ಏಳು ಲೋಕಸಭಾ ಸ್ಥಾನಗಳಿಗೆ ಇಂದು ಬೆಳಗ್ಗೆ ಮತದಾನ ಆರಂಭವಾಗಿದ್ದು, ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ವಿಸ್ತಾರವಾದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಉಪ ಪೊಲೀಸ್‌‍ ಆಯುಕ್ತ (ಚುನಾವಣಾ ಕೋಶ) ಸಂಜಯ್‌ ಸೆಹ್ರಾವತ್‌ ಪಿಟಿಐಗೆ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುಮಾರು 60,000 ಪೊಲೀಸ್‌‍ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಅವರಲ್ಲಿ ಕನಿಷ್ಠ 33,000 ಮಂದಿ ಮತದಾನ ಕೇಂದ್ರಗಳಲ್ಲಿ ಕಾವಲು ಕಾಯುತ್ತಿದ್ದಾರೆ. 2,628 ಮತದಾನ ಕೇಂದ್ರಗಳಿವೆ, ಅವುಗಳಲ್ಲಿ 429 ಸೂಕ್ಷ್ಮ ಇವೆ. ಹೆಚ್ಚುವರಿ ಅರೆಸೇನಾ ಪಡೆ ಸಿಬ್ಬಂದಿಯನ್ನು ಡ್ರೋನ್‌ ಮತ್ತು ಸಿಸಿಟಿವಿ ಕ್ಯಾಮೆರಾಗಳೊಂದಿಗೆ ಈ ಚುನಾವಣೆಯಲ್ಲಿ ನಿಯೋಜಿಸಲಾಗಿದೆ.

RELATED ARTICLES

Latest News