Monday, December 29, 2025
Homeಬೆಂಗಳೂರುಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಕಾರ್ಯಾಚರಣೆ : 2.5 ಕೋಟಿ ಮೌಲ್ಯದ ಡ್ರಗ್ಸ್ ವಶ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಕಾರ್ಯಾಚರಣೆ : 2.5 ಕೋಟಿ ಮೌಲ್ಯದ ಡ್ರಗ್ಸ್ ವಶ

CCB operation on the eve of New Year celebrations: Drugs worth Rs 2.5 crore seized

ಬೆಂಗಳೂರು,ಡಿ.29- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆ ಹಾಗೂ ಡೆಲಿವರಿ ಬಾಯ್‌ನನ್ನು ಬಂಧಿಸಿ 2.50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿದ್ದಾರೆ.

ಸೋಲದೇವನಹಳ್ಳಿ: ಬಿಸಿನೆಸ್‌‍ ವೀಸಾದಡಿ ಭಾರತಕ್ಕೆ ಬಂದಿರುವ ವಿದೇಶಿ ಪ್ರಜೆ ನಂತರ ಬೆಂಗಳೂರಿನಲ್ಲಿ ವಾಸವಾಗಿದ್ದುಕೊಂಡು ಮಾದಕ ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆಯನ್ನು ಬಂಧಿಸಿ 2 ಲಕ್ಷ ಹಣ, 1 ಕೆಜಿ 70 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 60 ಎಕ್ಸ್ ಟೆಸಿ ಪಿಲ್ಸ್ ಗಳು, 100 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 5 ಗ್ರಾಂ ಕೊಕೇನ್‌, 2 ಮೊಬೈಲ್‌, 1 ಲ್ಯಾಪ್‌ಟ್ಯಾಪ್‌ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 2.25 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ.

ಈ ವಿದೇಶಿ ಪ್ರಜೆಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ದೆಹಲಿ ಮತ್ತು ಮುಂಬೈನಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಸರಬರಾಜು ಮಾಡಲು ತಯಾರಿ ನಡೆಸಿದ್ದುದು ಗೊತ್ತಾಗಿದೆ.

ಈತನ ವಿರುದ್ಧ ಈ ಹಿಂದೆಯೂ ಸಹ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆಯಲ್ಲಿ ಎನ್‌ಡಿಪಿಎಸ್‌‍ ಪ್ರಕರಣ ದಾಖಲಾಗಿದ್ದು, ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ ನಂತರವೂ ಸಹ ಮತ್ತೆ ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿಕೊಂಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದ್ದು, ಇದೀಗ ಈತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ಬಂಡೇಪಾಳ್ಯ:
ನಗರದಲ್ಲಿ ಡೆಲಿವರಿ ಬಾಯ್‌ ಕೆಲಸ ಮಾಡಿಕೊಂಡು ಮಾದಕ ವಸ್ತು ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುತ್ತಿದ್ದ ತಮಿಳುನಾಡಿನ ಡ್ರಗ್‌ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ 25 ಲಕ್ಷ ಮೌಲ್ಯದ 5 ಗ್ರಾಂ ಕೊಕೇನ್‌ ಹಾಗೂ 100 ಎಲ್‌ಎಸ್‌‍ಡಿ ಸ್ಟ್ರಿಪ್‌್ಸಗಳು, 1 ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ.

ಉದ್ಯೋಗ ಅರಸಿಕೊಂಡು ತಮಿಳುನಾಡಿನಿಂದ ನಗರಕ್ಕೆ ಬಂದು ಡೆಲಿವರಿ ಬಾಯ್‌ ಕೆಲಸ ಮಾಡಿಕೊಂಡಿದ್ದು, ಅಪರಿಚಿತರಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ನಗರದ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಈತನ ವಿರುದ್ಧ ಬಂಡೇಪಾಳ್ಯ ಪೊಲೀಸ್‌‍ ಠಾಣೆಯಲ್ಲಿ ಎನ್‌ಡಿಪಿಎಸ್‌‍ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.ಈ ಕಾರ್ಯಾಚರಣೆಯನ್ನು ಎಸಿಪಿ ಮಹಾನಂದ ಇನ್‌್ಸಪೆಕ್ಟರ್‌ಗಳಾದ ಲಕ್ಷ್ಮೀ ನಾರಾಯಣ್‌,ಮಂಜಪ್ಪ ಹಾಗೂ ಸಿಬ್ಬಂದಿ ತಂಡ ಕೈಗೊಂಡು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

RELATED ARTICLES

Latest News