Friday, November 22, 2024
Homeರಾಷ್ಟ್ರೀಯ | Nationalದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ, ಕೆಲಕಾಲ ಆತಂಕ

ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ, ಕೆಲಕಾಲ ಆತಂಕ

ನವದೆಹಲಿ, ಮೇ 28- ರಾಜಧಾನಿ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಇಂದು ಬೆಳಗ್ಗೆ ಬಾಂಬ್‌ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 5 ಗಂಟೆ ಸುಮಾರಿಗೆ ಟೇಕ್‌ ಆಫ್ ಆಗಬೇಕಿತ್ತು. ತಕ್ಷಣವೇ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದ್ದು, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಬಾಂಬ್‌ ಬೆದರಿಕೆ ಬಂದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ. ವಿಮಾನವನ್ನು ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್‌ ನಿಷ್ಕ್ರಿಯ ತಂಡವು ಪ್ರಸ್ತುತ ಸ್ಥಳದಲ್ಲಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಗೆ ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ದೇಶದಲ್ಲಿ ಹಲವು ಸರ್ಕಾರಿ ಸಂಸ್ಥೆಗಳು, ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು ಮತ್ತು ಹೋಟೆಲ್ಗಳಿಗೆ ಬಾಂಬ್‌ ಬೆದರಿಕೆ ಮೇಲ್‌ಗಳನ್ನು ಕಳುಹಿಸಲಾಗಿದೆ. ಇಲ್ಲಿಯವರೆಗೆ, ಅವೆಲ್ಲವೂ ನಕಲಿ ಎಂದು ತಿಳಿದುಬಂದಿದೆ. ಕೆಲವರು ಪ್ರಯಾಣಿಕರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ, ವಾರಣಾಸಿಯಿಂದ ದೆಹಲಿ ವಿಮಾನ ವಿಳಂಬವಾಗಿದೆ ಎಂದು ದೂರಿದ್ದರು.

ಪ್ರಯಾಣಿಕರೊಬ್ಬರಿಗೆ ಉತ್ತರಿಸಿದ ಏರ್‌ಲೈನ್‌, ಈ ಅನುಭವಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ನಮ ಪ್ರಯಾಣಿಕರ ಪ್ರಯಾಣದ ಯೋಜನೆಗಳಿಗೆ ಅಡ್ಡಿಪಡಿಸುವ ಉದ್ದೇಶ ಎಂದಿಗೂ ನಮದಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ತಿಳಿಸಿದೆ.

ಹುಸಿ ಬಾಂಬ್‌ ಬೆದರಿಕೆ:
ದೆಹಲಿಯ ಟಿ2 (ಟರ್ಮಿನಲ್‌)ನಿಂದ ಈ ವಿಮಾನ ಬೆಳಿಗ್ಗೆ 5.30ರ ಸುಮಾರಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಾಗ ಬೆದರಿಕೆ ಬಂದಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೂಡಲೇ ಸ್ಥಳಾಂತರಿಸಲಾಯಿತು. ಬಳಿಕ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಕೊಂಡೊಯ್ಯಲಾಯಿತು. ಬಾಂಬ್‌ ಸ್ಕ್ವಾಡ್‌ ಮತ್ತು ಸಿಐಎಸ್‌‍ಎ್‌‍ ತಂಡವನ್ನು ಸ್ಥಳಕ್ಕೆ ಕರೆಸಿ ಶೋಧ ನಡೆಸಿದ್ದು, ಹುಸಿ ಬೆದರಿಕೆ ಎಂಬುದು ಖಚಿತಯಿತು ಎಂದು ಅಧಿಕಾರಿಗಳು ತಿಳಿಸಿದರು.

ಈ ಬಗ್ಗೆ ಸಿಐಎಸ್‌‍ಎಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ವಿಮಾನದಲ್ಲಿ ಟಿಶ್ಯೂ ಪೇಪರ್‌ ಮೇಲೆ ಬಾಂಬ್‌ ಇಟ್ಟಿರುವ ಬಗ್ಗೆ ಬರೆದಿರುವುದು ಪತ್ತೆಯಾಗಿದೆ. ತನಿಖೆ ನಡೆಸಿದಾಗ ಅಂಥದ್ದೇನೂ ಇಲ್ಲ ಎಂಬುದು ಗೊತ್ತಾಯಿತು ಎಂದರು.

RELATED ARTICLES

Latest News