ಬೆಂಗಳೂರು ಮೇ.29. ಅತ್ಯಾಚಾರ ಅರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಕಳೆದ 31 ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ಅವರು ಮೊನ್ನೆ ಅಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು ಈ ಬೆನ್ನಲ್ಲೇ ಇಂದು ಪ್ರಜ್ವಲ್ ಪರವಕೀಲರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಅರ್ಜಿಯನ್ನು ಇಂದೆ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ವಕೀಲರು ಮಾಡಿದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಲಿಲ್ಲ ಮೇ 31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ನ್ಯಾಯಾಧೀಶರು ಹೇಳಿದರು ಹೀಗಾಗಿ ಪ್ರಜ್ವಲ್ ಅವರ ಜಾಮೀನು ಅರ್ಜಿ ವಿಚಾರಣೆ ಮೇ 31ಕ್ಕೆ ನಿಗದಿಯಾಗಿದೆ ಪ್ರಜ್ವಲ್ ಅವರು ವಿದೇಶದಿಂದ ಹಿಂದಿರುಗಲು ವಿಮಾನದ ಟಿಕೆಟ್ ಬುಕ್ ಆಗಿದೆ ಅವರನ್ನು ಬಂಧಿಸಲು ಎಸ್ಐಟಿ ಎಲ್ಲಾ ತಯಾರಿ ನಡೆಸಿದೆ.
ತಮ್ಮ ಮೇಲಿನ ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ