Sunday, October 6, 2024
Homeರಾಜ್ಯವಿಧಾನ ಪರಿಷತ್‌ ಚುನಾವಣೆ: ಮತದಾನಕ್ಕೆ ಸಾಂದರ್ಭಿಕ ರಜೆ ನೀಡಲು ಆದೇಶ

ವಿಧಾನ ಪರಿಷತ್‌ ಚುನಾವಣೆ: ಮತದಾನಕ್ಕೆ ಸಾಂದರ್ಭಿಕ ರಜೆ ನೀಡಲು ಆದೇಶ

ಬೆಂಗಳೂರು, ಮೇ 30- ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂ.3ರಂದು ಮತದಾನ ನಡೆಯಲಿದ್ದು, ಅಂದು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಶಿಕ್ಷಕರು ಹಾಗೂ ಪದವೀಧರರಿಗೆ ಸೀಮಿತವಾಗಿ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸರ್ಕಾರ ಆದೇಶಿಸಿದೆ.

ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈಶಾನ್ಯ ಪದವೀಧರ, ನೈರುತ್ಯ ಪದವೀಧರ, ಬೆಂಗಳೂರು ಪದವೀಧರರ ಕ್ಷೇತ್ರಗಳು ಮತ್ತು ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ರಜೆ ಮಂಜೂರು ಮಾಡಬೇಕಿದೆ.

ವಿಧಾನ ಪರಿಷತ್‌ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ, ಕೇಂಧ್ರ ಸರ್ಕಾರದ ಕಾರ್ಖಾನೆಗಳು,ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಘ-ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಮತ್ತು ದಿನಗೂಲಿ ಮೇಲೆ ಕೆಲಸ ನಿರ್ದೇಶಿಸುವ ಪದವೀಧರರು ಹಾಗೂ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RELATED ARTICLES

Latest News