Sunday, November 24, 2024
Homeರಾಷ್ಟ್ರೀಯ | Nationalಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಲಷ್ಕರ್‌ ಕಮಾಂಡರ್‌ಗಳನ್ನು ಸೆರೆ ಹಿಡಿದ ಸೇನೆ

ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಲಷ್ಕರ್‌ ಕಮಾಂಡರ್‌ಗಳನ್ನು ಸೆರೆ ಹಿಡಿದ ಸೇನೆ

ಶ್ರೀನಗರ,ಜೂ.3- ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್‌-ಎ-ತೊಯ್ಬಾದ ಸಂಘಟನೆಯ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಕಮಾಂಡರ್‌ಗಳನ್ನು ಭಾರತೀಯ ಸೇನೆ ಸೆರೆ ಹಿಡಿದಿದೆ.ಪುಲ್ವಾಮಾದ ನೆಹಮಾ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣದ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡವೆ ಗುಂಡಿನ ಚಕಮಕಿ ನಡೆದಿದೆ.


ಭದ್ರತಾ ಪಡೆಗಳು ಮತ್ತು ಪೊಲೀಸರು ಕಾರ್ಡನ್‌ ಮತ್ತು ಸರ್ಚ್‌ ಕಾರ್ಯಾಚರಣೆ ಆರಂಭಿಸಿದಾಗ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದ್ದರು.ಭಯೋತ್ಪಾದಕರಾದ ರಯೀಸ್‌‍ ಅಹದ್‌ ಮತ್ತು ರೆಯಾಜ್‌ ಅಹದ್‌ ದಾರ್‌ ಇಬ್ಬರೂ ದಕ್ಷಿಣ ಕಾಶೀರದ ಪುಲ್ವಾಮಾ ದ ನಿವಾಸಿಗಳೆಂದು ತಿಳಿದುಬಂದಿದೆ.

ಈ ಬಗ್ಗೆ ಕಾಶೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದು ಪುಲ್ವಾಮಾ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಎನ್‌ಕೌಂಟರ್‌ ಮಾಡಲಾಗಿದ್ದು ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಗುಂಡಿನ ಚಕಮಕಿ ನಡೆಯುತ್ತಿದ್ದು, ಇದುವರೆಗೆ ಎರಡೂ ಕಡೆಯಿಂದ ಯಾವುದೇ ಸಾವುನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಮೇ 7ರಂದು ಜಮುಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು. ಲಷ್ಕರ್‌ ಬೆಂಬಲಿತ ಭಯೋತ್ಪಾದಕ ಸಂಘಟನೆ ರೆಸಿಸ್ಟೆನ್‌್ಸ ಫ್ರಂಟ್‌ (ಟಿಆರ್‌ಎಫ್‌‍) ನ ಸಕ್ರಿಯ ಕಾರ್ಯಕರ್ತನಾಗಿದ್ದ ಬಸಿತ್‌ದಾರ್‌ ಗುಂಡಿನ ಚಕಮಕಿಯಲ್ಲಿ ಹತರಾದ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದಾನೆ.

RELATED ARTICLES

Latest News