Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-06-2024)

ನಿತ್ಯ ನೀತಿ : ಮನುಷ್ಯ ಮತ್ತೊಬ್ಬ ಮನುಷ್ಯನನ್ನು ಸಂತೋಷ ಪಡಿಸಲು ಹಣ ಬೇಕಾಗಿಲ್ಲ. ಆತೀಯತೆ ತುಂಬಿದ ಸಮಯ ಮತ್ತು ಪ್ರೀತಿಯ ನಾಲ್ಕು ಮಾತುಗಳು ಸಾಕು.

ಪಂಚಾಂಗ : 05-06-2024, ಬುಧವಾರ
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಕೃತ್ತಿಕಾ / ಯೋಗ: ಸುಕರ್ಮಾ / ಕರಣ: ವಿಷ್ಠಿ

ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.44
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ಸ್ವ ಪ್ರಯತ್ನದಿಂದ ಯಶಸ್ಸು ಸಿಗಲಿದೆ. ದಾಂಪತ್ಯ ಜೀವನದಲ್ಲಿ ಅನಿರೀಕ್ಷಿತ ತಿರುವುಗಳಾಗಲಿವೆ.
ವೃಷಭ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಮಿಥುನ: ಸಂಗಾತಿಯೊಡನೆ ಉತ್ತಮ ಬಾಂಧವ್ಯ ಹೊಂದುವಿರಿ. ವಿದ್ಯಾರ್ಥಿಗಳಿಗೆ ಅನುಕೂಲ.

ಕಟಕ: ಅಮೂಲ್ಯ ವಸ್ತುವಿನ ಕಳ್ಳತನವಾಗಲಿದೆ. ಉಪನ್ಯಾಸಕ ವೃತ್ತಿಯವರಿಗೆ ನಷ್ಟ.
ಸಿಂಹ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮ ವಾಗಿ ನೆರವೇರಲಿವೆ.
ಕನ್ಯಾ: ಪೊಲೀಸ್‌ ಅಧಿ ಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ.

ತುಲಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ವೃಶ್ಚಿಕ: ಬುದ್ಧಿಹೀನರಾಗಿ ವರ್ತಿಸುವಿರಿ. ಉಪನ್ಯಾಸಕ ವೃತ್ತಿಯವರಿಗೆ ನಷ್ಟ.
ಧನುಸ್ಸು: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.

ಮಕರ: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಕುಂಭ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮೀನ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.

RELATED ARTICLES

Latest News