Sunday, November 24, 2024
Homeರಾಜಕೀಯ | Politicsಮಂಡ್ಯದಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಚಲುವರಾಯಸ್ವಾಮಿ..?

ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಚಲುವರಾಯಸ್ವಾಮಿ..?

ಬೆಂಗಳೂರು, ಜೂ.6- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸೋಲು ಹಿನ್ನೆಲೆಯಲ್ಲಿ ಎನ್‌.ಚಲುವರಾಯಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಈ ಬಗ್ಗೆ ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ತಮ್ಮ ರಾಜೀನಾಮೆ ಕುರಿತು ಸಚಿವ ಎನ್‌.ಚಲುವರಾಯಸ್ವಾಮಿ ಪ್ರಸ್ತಾಪಿಸಿರುವ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ.

ಸ್ಟಾರ್‌ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಚುನಾವಣೆ ಸೋತರೇ ನನಗೆ ಕೆಲಸ ಮಾಡುವುದಕ್ಕೆ ಮನಸು ಬರಲ್ಲ. ಟೇಬಲ್‌ ಕುಟ್ಟಲು ಆಗಲ್ಲ, ಸಂಪುಟದಲ್ಲಿ ತಲೆ ಎತ್ತಿ ಮಾತಾಡಲು ಆಗಲ್ಲ. ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕನಾಗಿ ಕೆಲಸ ಮಾಡಬೇಕು. ಈ ಚುಣಾವಣೆಯಲ್ಲಿ ಸೋತರೆ ಅಳಲ್ಲ, ಯಾರ ಕೈಗೂ ಸಿಗುವುದಿಲ್ಲ. ಎರಡು ತಿಂಗಳು ಎಲ್ಲಾದರೂ ಹೊರಗಡೆ ಪ್ರವಾಸಕ್ಕೆ ಹೋಗುತ್ತೇನೆ.

ಮೊಬೈಲ್‌ನ ಹಳೇ ಸಿಮ್‌ ಕಿತ್ತೆಸೆದು ಹೊಸ ಸಿಮ್‌ ಹಾಕಿಕೊಳ್ತೇನೆ. ರಾಜಕೀಯ ನಿವೃತ್ತಿ ಘೋಷಣೆ ಮಾಡಿ, ನೆಮ್ಮದಿಯಾಗಿ ಇರ್ತೀನಿ ಎಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಚಲುವರಾಯಸ್ವಾಮಿ ಭಾಷಣ ಮಾಡಿದ್ದರು.

ಸದ್ಯ ಈಗ ಮಂಡ್ಯದಲ್ಲಿ ಹೆಚ್ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದು ಜೆಡಿಎಸ್‌ ಕಾರ್ಯಕರ್ತರು ಸಚಿವ ಚೆಲುವರಾಯಸ್ವಾಮಿ ಅವರ ಭಾಷಣದ ವಿಡಿಯೋ ವೈರಲ್‌ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ ರಾಜೀನಾಮೆ ಬಗ್ಗೆ ಚರ್ಚೆ ಜೋರಾಗಿದೆ.

RELATED ARTICLES

Latest News