Friday, November 22, 2024
Homeರಾಜ್ಯಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸ್ವಯಂ ಪ್ರೇರಿತ ರಾಜೀನಾಮೆ

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸ್ವಯಂ ಪ್ರೇರಿತ ರಾಜೀನಾಮೆ

ಬೆಂಗಳೂರು,ಜೂ.6- ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಪಕ್ಷದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ನಾನು ಮತ್ತು ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು.

ಮುಂದುವರೆದು ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ಆದರೆ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂಬ ಕಾರಣಕ್ಕೆ ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಿದರು.
ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್‌ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಲಿತಾಂಶದ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತೋಷವಾಗಿದೆ. ನಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯ ಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ ಎಂದರು.

ಗ್ಯಾರಂಟಿ ಜಾರಿ ವಿಚಾರವಾಗಿ ಕೇಳಿದಾಗ, ನಮ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಕಾಂಗ್ರೆಸ್‌‍ ಪಕ್ಷ ಎಂದಿಗೂ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಪಡೆಯುವುದಿಲ್ಲ. ಕಾಂಗ್ರೆಸ್‌‍ ಸರ್ಕಾರ ಬಂದಾಗ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಪುನರುಚ್ಚರಿಸಿದರು.

RELATED ARTICLES

Latest News