Wednesday, December 31, 2025
Homeರಾಜ್ಯಮಾಜಿ ಸಚಿವ, ಶಾಸಕ ನಾಗೇಂದ್ರ ಆಪ್ತರಿಗೆ ಸಿಬಿಐ ಶಾಕ್‌..!

ಮಾಜಿ ಸಚಿವ, ಶಾಸಕ ನಾಗೇಂದ್ರ ಆಪ್ತರಿಗೆ ಸಿಬಿಐ ಶಾಕ್‌..!

CBI shocks former minister and MLA Nagendra's close aides..!

ಬೆಂಗಳೂರು,ಡಿ.31- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಸಂಬಂಧ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರ ಆಪ್ತರ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರಿಗೆ ಮಾಹಿತಿಯನ್ನು ಕೊಡದೆ ದಾಳಿ ನಡೆಸಿದೆ.

ನಾಗೇಂದ್ರ ಆಪ್ತ ವಿಶ್ವನಾಥ್‌ ಅವರ ಬಳ್ಳಾರಿಯ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ದಾಳಿ ಸಂದರ್ಭದಲ್ಲಿ ವಿಶ್ವನಾಥ್‌ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಅವರ ಸಹೋದರರು ಮತ್ತು ಕುಟುಂಬದ ಸದಸ್ಯ ರಿಂದ ಮಾಹಿತಿ ಪಡೆದ ಸಿಬಿಐ ಕೆಲಹೊತ್ತು ವಿಚಾರಣೆಗೂ ಒಳಪಡಿಸಿತು.

ಬ್ರೂಸ್‌‍ಪೇಟೆ ಪೊಲೀಸ್‌‍ ಠಾಣೆಗೆ ವಿಶ್ವನಾಥ್‌ ಸಹೋದರನನ್ನು ಕರೆತಂದ ಪೊಲೀಸರು ವಾಲೀಕಿ ಹಗರಣ ಸಂಬಂಧ ಪಾತ್ರದ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಇನ್ನು ದಾಳಿ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿದ್ದ ಕೆಲವು ದಾಖಲೆಗಳನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿತ್ತು.ಸಿಬಿಐ ಈವರೆಗೆ ಬ್ಯಾಂಕ್‌ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್‌ ಬಂಗಾರಪ್ಪ ಅವರು ರಿಟ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್‌, ವಿಶೇಷ ತನಿಖಾ ತಂಡದ(ಖಿ) ತನಿಖೆಯನ್ನು ರದ್ದುಗೊಳಿಸಿ, ಪ್ರಕರಣದ ಸಮಗ್ರ ತನಿಖೆಗೆ ನಡೆಸುವಂತೆ ಸಿಬಿಐಗೆ ಸೂಚಿಸಿತ್ತು.ಇನ್ನು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿತ್ತು.

ಈ ಪ್ರಕರಣದಲ್ಲಿ ಹಣ ದುರುಪಯೋಗದ ಆರೋಪಗಳಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬ್ಯಾಂಕ್‌ ಮನವಿ ಮಾಡಿತ್ತು. ಆದರೆ, ಹೈಕೋರ್ಟ್‌ ಈ ಮನವಿಯನ್ನು ತಿರಸ್ಕರಿಸಿತ್ತು. ಈಗ ಬಿಜೆಪಿ ನಾಯಕರ ಅರ್ಜಿ ಪುರಸ್ಕರಿಸಿ ಹೈಕೋರ್ಟ್‌ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.

ಏನಿದು ಪ್ರಕರಣ?
ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆಯ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು. ಚಂದ್ರಶೇಖರನ್‌ ಅವರು ಆತಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು.

ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಮಹರ್ಷಿ ವಾಲೀಕಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್‌ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಬಳಿಕ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಇ.ಡಿ ಅವರನ್ನು ವಶಕ್ಕೆ ಪಡೆದುಕೊಂಡು ಬಂಧನಕ್ಕೆ ಒಳಪಡಿಸಿತ್ತು.

RELATED ARTICLES

Latest News