ಬೆಂಗಳೂರು,ಜೂ.11- ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು, ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಅವರು, ಮೇಲ್ಮನವಿ ಪ್ರಕರಣಗಳನ್ನು 3 ವಿಲೇವಾರಿ ಮಾಡಬೇಕು, ಐಜಿಎಸ್‌ಟಿ ನಕಾರಾತಕ ಸೆಟಲ್ ಮೆಂಟ್ ಆಗುವ ಕಡೆ, ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು ಎಂದು ಎಚ್ಚರಿಸಿದರು.
ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹ್ದುೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಿಸಿದ್ದಾರೆ.
ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಸೂಚನೆ ನೀಡಲಾಗಿದೆ.ಅಂದಾಜು, ಜಾರಿ, ಮೇಲನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. ಕಾರ್ಯಯೋಜನೆ ಸಿದ್ದಪಡಿಸಬೇಕು. ಮೇಲನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮೆ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ತಿಳಿಸಿದ ಅವರು, ಆ ವೇಳೆಗೆ ಗುರಿ ತಲುಪಿರುವಂತೆ ತಾಕೀತು ಮಾಡಿದ್ದಾರೆ.