Friday, November 22, 2024
Homeರಾಜ್ಯಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ : ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್‌‍

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ : ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್‌‍

ಬೆಂಗಳೂರು,ಜೂ.12- ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ಜಾರಿ ಮಾಡಿದೆ. ಇದರ ಬೆನ್ನಲ್ಲೇ ತಮ ಮೇಲೆ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಿಐಡಿ ತನಿಖಾ ತಂಡ ಬಿಎಸ್‌‍ವೈ ಅವರಿಗೆ ಪ್ರಕರಣ ಕುರಿತಾಗಿ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್‌‍ ನೀಡಿದೆ.ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿರಬೇಕಿರುವುದರಿಂದ ನಾನು ದೆಹಲಿಗೆ ತೆರಳುತ್ತಿದ್ದೇನೆ. ಜೂ.15ರಂದು ವಿಚಾರಣೆಗೆ ಹಾಜರಾಗುತ್ತೇನೆ. ಹಾಗಾಗಿ ವಿನಾಯಿತಿ ನೀಡಬೇಕೆಂದು ಯಡಿಯೂರಪ್ಪ ನೋಟಿಸ್‌‍ಗೆ ಉತ್ತರಿಸಿದ್ದಾರೆ.

ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನಲಾದ ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರದಲ್ಲಿ ಕಳೆದ ಮಾರ್ಚ್‌ 14ರಂದು ದೂರು ನೀಡಲಾಗಿತ್ತು. ಅದಾ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್‌‍ ಜಾರಿ ಮಾಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ಏಪ್ರಿಲ್‌ 12ರಂದು ಪೊಲೀಸರ ವಿಚಾರಣೆಗೆ ಬಿಎಸ್‌‍ ಯಡಿಯೂರಪ್ಪ ಅವರು ಹಾಜರಾಗಿದ್ದರು.

ಅಂದು ವಿಚಾರಣೆ ವೇಳೆ, ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದರು. ನಂತರ ಪೊಕ್ಸೋ ಪ್ರಕರಣದ ತನಿಖೆ ಜವಾಬ್ದಾರಿ ವಹಿಸಿಕೊಂಡ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದೆ.

ಬೆಂಗಳೂರಿನ ಸದಾಶಿವ ನಗರದ ಪೊಲೀಸ್‌‍ ಠಾಣೆಗೆ ಮಾಚ್‌ 14ರಂದು ರಾತ್ರಿ ಹೆಣ್ಣು ಮಗಳೊಬ್ಬರು ತೆರಳಿ ತನ್ನ ಅಪ್ತಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.

ಈ ಮಹಿಳೆಯು ಈ ಹಿಂದೆಯು ಕೆಲವು ಪ್ರಮುಖರ ವಿರುದ್ಧ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಮೇ ತಿಂಗಳಲ್ಲಿ ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಅಸುನೀಗಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಪೊಕ್ಸೋ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಡಾ.ಜಿ.ಪರಮೇಶ್ವರ್‌, ತನಿಖೆ ನಡೆಯುತ್ತಿದೆ. ಸಿಐಡಿಯಿಂದ ತನಿಖೆಯು ಪ್ರಗತಿಯಲ್ಲಿದೆ. ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

Latest News