Friday, November 22, 2024
Homeಅಂತಾರಾಷ್ಟ್ರೀಯ | Internationalಕುವೈತ್‌ನಲ್ಲಿ ಅಪಾರ್ಟ್‌ಮೆಂಟ್‌ಗೆ ಬೆಂಕಿ ಬಿದ್ದು ಭಾರತೀಯರೂ ಸೇರಿ 53 ಮಂದಿ ಸಾವು

ಕುವೈತ್‌ನಲ್ಲಿ ಅಪಾರ್ಟ್‌ಮೆಂಟ್‌ಗೆ ಬೆಂಕಿ ಬಿದ್ದು ಭಾರತೀಯರೂ ಸೇರಿ 53 ಮಂದಿ ಸಾವು

ದುಬೈ, ಜೂನ್‌.12- ಗಲ್ಫ್ ನ ಕುವೈತ್‌ನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಸಂಭವಿಸಿದ ದೊಡ್ಡ ಬೆಂಕಿಯಲ್ಲಿ 53 ಮಂದಿ ಸಾವನ್ನಪ್ಪಿದವರಲ್ಲಿ ಹಲವಾರು ಭಾರತೀಯರು ಸೇರಿದ್ದಾರೆ ಎಂದು ವರದಿಯಾಗಿದೆ.

ಇಂದು ಮುಂಜಾನೆ ಕುವೈತ್‌ನ ದಕ್ಷಿಣ ಅಹ್ಮದಿ ಗವರ್ನರೇಟ್‌ನಲ್ಲಿರುವ ಮಂಗಾಫ್‌ ಪ್ರದೇಶದ ಆರು ಅಂತಸ್ತಿನ ಕಟ್ಟಡದ ಅಡುಗೆಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕಟ್ಟಡದಲ್ಲಿ ಸುಮಾರು 160 ಜನರು ವಾಸಿಸುತ್ತಿದ್ದರು ಎಂದು ವರದಿಯಾಗಿದೆ, ಅವರು ಅದೇ ಕಂಪನಿಯ ಕೆಲಸಗಾರರು.ಅಲ್ಲಿ ತಂಗಿದ್ದ ಅನೇಕ ಕಾರ್ಮಿಕರು ಭಾರತೀಯರು ಎಂದು ವರದಿಯಾಗಿದೆ.

ಇಂದು ಭಾರತೀಯ ಕಾರ್ಮಿಕರನ್ನು ಒಳಗೊಂಡ ದುರಂತ ಬೆಂಕಿ-ಅಪಘಾತಕ್ಕೆ ಸಂಬಂಧಿಸಿದಂತೆ, ರಾಯಭಾರ ಕಚೇರಿಯು ತುರ್ತು ಸಹಾಯವಾಣಿ ಸಂಖ್ಯೆ: +965-65505246 ಅನ್ನು ತೆರೆದಿದೆ.ಈ ಸಹಾಯವಾಣಿಯನ್ನು ಸಂಪರ್ಕಿಸಲು ಸಂಬಂಧಿಸಿದ ಎಲ್ಲರನ್ನು ವಿನಂತಿಸಲಾಗಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ರಾಯಭಾರ ಕಚೇರಿಯು ಬದ್ಧವಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್ ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.

ಕುವೈತ್‌ನ ಒಟ್ಟು ಜನಸಂಖ್ಯೆಯಲ್ಲಿ ಭಾರತೀಯರು ಶೇಕಡಾ 21ರಷ್ಟಿದ್ದು,ಅದರಲ್ಲಿ ಶೇ.30 ರಷ್ಟು (ಅಂದಾಜು 9 ಲಕ್ಷಗಳು) ಇಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಕುವೈತ್‌ ನಗರದಲ್ಲಿ ಬೆಂಕಿ ಅವಘಡದ ಸುದ್ದಿಯಿಂದ ತೀವ್ರ ಆಘಾತವಾಗಿದೆ. 40 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಮತ್ತು 50 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್‌‍ ಜೈಶಂಕರ್‌ ತಿಳಿಸಿದ್ದಾರೆ.

ದುರಂತವಾಗಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಮತ್ತು ಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ನಮ್ಮ ರಾಯಭಾರ ಕಚೇರಿಯು ಸಂಪೂರ್ಣ ಸಹಾಯವನ್ನು ನೀಡುತ್ತದೆ ಎಂದು ಅವರು ಹೇಳಿದರು.

ಕುವೈತ್‌ನ ಆಂತರಿಕ ಸಚಿವ ಶೇಖ್‌ ಫಹಾದ್‌ ಅಲ್‌‍-ಯೂಸುಫ್‌ ಅಲ್‌‍-ಸಬಾಹ್‌ ಅವರು ಮಾರಣಾಂತಿಕ ಬೆಂಕಿ ಅನಾಹುತ ಸಂಭವಿಸಿದ ಮಂಗಾಫ್‌ ಕಟ್ಟಡದ ಮಾಲೀಕರು, ಕಟ್ಟಡದ ದ್ವಾರಪಾಲಕ ಮತ್ತು ಕಾರ್ಮಿಕರಿಗೆ ಹೊಣೆಗಾರರಾಗಿರುವ ಕಂಪನಿಯ ಮಾಲೀಕರನ್ನು ಅಪರಾಧಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.

ಇಂದು ಸಂಭವಿಸಿರುವುದು ಕಂಪನಿ ಮತ್ತು ಕಟ್ಟಡ ಮಾಲೀಕರ ದುರಾಸೆಯ ಪರಿಣಾಮವಾಗಿದೆ ಎಂದು ಬೆಂಕಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದು ವಸತಿ ಕಟ್ಟಡದಲ್ಲಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಕೂಡಿಹಾಕಿರುವುದು ಕಾನೂನು ಉಲ್ಲಂಘನೆ . ತಕ್ಷಣದ ಕ್ರಮವನ್ನು ಕೈಗೊಳ್ಳಲು ಕುವೈತ್‌ ಪುರಸಭೆ ಮತ್ತು ಮಾನವಶಕ್ತಿಯ ಸಾರ್ವಜನಿಕ ಪ್ರಾಧಿಕಾರಕ್ಕೆ ಆದೇಶವನ್ನು ನೀಡಿದ್ದೇನೆ ಮತ್ತು ಇದೇ ರೀತಿ ಎಲ್ಲಾ ಸುರಕ್ಷತಾ ಅವಶ್ಯಕತೆಗಳು ಜಾರಿಯಲ್ಲಿವೆ ಎಂದು ಅವರು ಹೇಳಿದರು.

RELATED ARTICLES

Latest News