Thursday, January 1, 2026
Homeರಾಜ್ಯಕರಾವಳಿಯ ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ.ಎನ್‌.ವಿನಯ್‌ ಹೆಗ್ಡೆ ನಿಧನ

ಕರಾವಳಿಯ ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ.ಎನ್‌.ವಿನಯ್‌ ಹೆಗ್ಡೆ ನಿಧನ

Nitte University Chancellor and educationist N Vinay Hegde passes away

ಮಂಗಳೂರು,ಜ.1- ಕರಾವಳಿಯ ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ, ನ್ಯಾ.ಸಂತೋಷ್‌ ಹೆಗ್ಡೆ ಅವರ ಸೋದರ ಡಾ.ಎನ್‌.ವಿನಯ್‌ ಹೆಗ್ಡೆ(86) ಅವರು ಇಂದು ಬೆಳಗಿನಜಾವ ನಿಧನರಾಗಿದ್ದಾರೆ.ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 8:30ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್‌ ಹೆಗ್ಡೆ, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್‌‍.ಹೆಗ್ಡೆ ಅವರ ದ್ವಿತೀಯ ಪುತ್ರ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರ ಸಹೋದರ.ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದ ವಿನಯ್‌ ಅವರು, ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞ ಎಂದು ಹೆಸರುವಾಸಿಯಾಗಿದ್ದರು.

ಮಂಗಳೂರಿನ ಸೈಂಟ್‌ ಅಲೋಶಿಯಸ್‌‍ ಕಾಲೇಜಿನಲ್ಲಿ ತಮ ಶಿಕ್ಷಣ ಪೂರೈಸಿದವರು. ತಂದೆಯ ಆಶಯದಂತೆ 1979ರಲ್ಲಿ ನಿಟ್ಟೆ ಎಜುಕೇಶನ್‌ ಟ್ರಸ್ಟ್‌ನ್ನು ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಎಂಜಿನಿಯರಿಂಗ್‌, ದಂತವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್‌ ಕಾಲೇಜುಗಳು ಸೇರಿವೆ.

ಪ್ರಸ್ತುತ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು. ಲೆಮಿನಾ ಸಸ್ಪೆನ್ಷನ್‌ ಪ್ರೈವೇಟ್‌ ಲಿಮಿಟೆಡ್‌ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್‌ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.

ರಾಜ್ಯದ ಹಲವು ಸಮಿತಿಗಳಲ್ಲಿ ಮತ್ತು ಕೈಗಾರಿಕಾ ಒಕ್ಕೂಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರಿಗೆ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ ಲಭಿಸಿದೆ. ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು.

ಸಂತಾಪ : ದೂರದೃಷ್ಟಿಯ ನಾಯಕ ಮತ್ತು ಶಿಕ್ಷಣ ತಜ್ಞ, ನಿಟ್ಟೆಯ ಎನ್‌.ವಿನಯ್‌ ಹೆಗ್ಡೆ ಅವರ ನಿಧನದಿಂದ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಮ ಸಂತಾಪ ಸೂಚನಾ ಸಂದೇಶದಲ್ಲಿ ತಿಳಿಸಿದ್ದಾರೆ.

ಎನ್‌.ವಿನಯ್‌ ಹೆಗ್ಡೆ ಅವರು ತಮ ದೂರದೃಷ್ಟಿ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ನಿಟ್ಟೆ ಡೀಮ್ಡೌ ಟು ಬೀ ಯೂನಿವರ್ಸಿಟಿ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳನ್ನು ಬೆಳೆಸಿದವರು. ಬಡ ವಿದ್ಯಾರ್ಥಿಗಳಿಗೆ, ಮಹಿಳೆಯರ ಸಬಲೀಕರಣಕ್ಕೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿದವರು. 24 ಗ್ರಾಮೀಣ ಆಸ್ಪತ್ರೆಗಳನ್ನು ನಡೆಸುತ್ತಿದ್ದರು ಎಂದು ಸರಿಸಿದ್ದಾರೆ.

ಉದ್ಯೋಗ ಪತ್ರ ಪ್ರಶಸ್ತಿ, ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರಿಗೆ ಲಭಿಸಿದ್ದವು. ಭಗವಂತ ಅವರ ಆತಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ, ಅಭಿಮಾನಿಗಳಿಗೆ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

RELATED ARTICLES

Latest News