Saturday, October 5, 2024
Homeರಾಜ್ಯಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ಜೆಡಿಎಸ್‌‍ ಪ್ರತಿಭಟನೆ

ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ಜೆಡಿಎಸ್‌‍ ಪ್ರತಿಭಟನೆ

ಬೆಂಗಳೂರು,ಜೂ.18- ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್‌‍ ನಗರದಲ್ಲಿಂದು ಪ್ರತಿಭಟನೆ ನಡೆಸಿತು.ಬೆಂಗಳೂರು ಮಹಾನಗರ ಜೆಡಿಎಸ್‌‍ ವತಿಯಿಂದ ರಾಜ್ಯಸರ್ಕಾರದ ವಿರುದ್ಧ ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿನ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಹೆಚ್ಚಳ ಮಾಡಿರುವ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸುವಂತೆ ಆಗ್ರಹಿಸಲಾಯಿತು.

ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ, ವಿಧಾನಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎನ್‌.ಜವರಾಯಿಗೌಡ, ಜೆಡಿಎಸ್‌‍ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ, ರೇವಣ್ಣ ಸೇರಿದಂತೆ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯಸರ್ಕಾರ ತೈಲಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಹೊರೆಯಾಗಿಸಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗಲಿದ್ದು, ಶ್ರೀಸಾಮಾನ್ಯರಿಗೆ ತೊಂದರೆಯಾಗಲಿದೆ.

ರಾಜ್ಯಸರ್ಕಾರ ಕೂಡಲೇ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜೆಡಿಎಸ್‌‍ನ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

Latest News