ಬೆಂಗಳೂರು, ಜೂ.18- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ಪ್ರಜ್ಞೆ ಯಿಂದ ಪ್ರಕರಣ ಹೊರ ಬಂದಿದ್ದು, ಸೆಲಬ್ರಿಟಿಗಳನ್ನು ಸಹ ಬಂಧಿಸಲಾಗಿದೆ ಎಂದು ವಿವರಿಸಿದರು.
ಈ ಪ್ರಕರಣವನ್ನು ಬೇರೆ ಬೇರೆ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಸಮರ್ಪಕ ರೀತಿಯಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ ಎಂದರು.
ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರ ಬಂದಿದೆ. ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ಒದಗಿಸಿಕೊಡಬೇಕು. ಆದ್ದರಿಂದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದು ಅವರು ಹೇಳಿದರು.
ಇದು ಗಂಭೀರ ಪ್ರಕರಣವಾಗಿರುವುದರಿಂದ ಎಲ್ಲಾ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸುತ್ತೇವೆ. ಈ ಪ್ರಕರಣದ ಗಂಭೀರತೆ ಅರಿತು ವಿಜಯನಗರ ಉಪವಿಭಾಗದ ಎಸಿಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.
ಆ ವಿಭಾಗದ ಎಲ್ಲಾ ಇನ್‌್ಸಪೆಕ್ಟರ್ಗಳು ಹಾಗೂ ಸಿಬ್ಬಂದಿ ತನಿಖಾ ತಂಡದಲ್ಲಿದ್ದಾರೆ.
ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆ ತರಲಾಗಿದೆ. ಕೆಲವು ಆರೋಪಿಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಆದ್ದರಿಂದ ಚಿತ್ರದುರ್ಗ, ಮೈಸೂರು, ಬೆಂಗಳೂರು ನಗರ ಹಾಗೂ ಇನ್ನಿತರ ಕಡೆ ತನಿಖೆ ಮತ್ತು ಸ್ಥಳ ಮಹಜರು ಮಾಡಬೇಕಾಗಿದೆ. ಆದ್ದರಿಂದ ಹಲವು ಆಯಾಮಗಳಲ್ಲಿ ಒಬ್ಬೊಬ್ಬ ಇನ್ಸ್ ಪೆಕ್ಟರ್ ಒಂದೊಂದು ಕಡೆ ಹೋಗಿ ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ ಎಂದು ಆಯುಕ್ತರು ಹೇಳಿದರು.
ಈ ಪ್ರಕರಣದಲ್ಲಿ ಸೆಲೆಬ್ರೆಟಿಗಳು ಇರುವುದರಿಂದ ಬಹಳ ಜಾಗರೂಕತೆಯಿಂದ ಹಲವು ಸಾಕ್ಷ್ಯಾಧಾರಗಳನ್ನು ಕಲೆಹಾಕಲಾಗುತ್ತಿದೆ. ಊಹಾ-ಪೋಹಾಗಳಿಗೆ ಕಿವಿಗೆಡಬೇಡಿ. ತನಿಖೆಯ ಭಾಗವಲ್ಲದ ಕೆಲವು ಉತೆ್ಪ್ರೕಕ್ಷಗಳು, ಅನೇಕ ಅಂಶಗಳು ಕೇಳಿ ಬರುತ್ತಿದೆ. ಇದು ಸಲ್ಲದು. ನಾವು ಈ ಪ್ರಕರಣವನ್ನು ಕಾನೂನಿನ ಮುಂದೆ ತೆಗೆದುಕೊಂಡು ಹೋಗಬೇಕಾಗಿದೆ. ದಯವಿಟ್ಟು ತಾಳೆ- ಸಹನೆಯಿಂದ ನಮೊಂದಿಗೆ ಸಹಕರಿಸಿದರೆ ಸಮಗ್ರವಾಗಿ ತಾತ್ವಿಕ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗಲು ಸಹಕರಿಯಾಗುತ್ತದೆ. ನಾವೆಲ್ಲರೂ ಸೇರಿ ಜವಾಬ್ದಾರಿಯಿಂದ ಈ ಪ್ರಕರಣವನ್ನು ಬಗೆಹರಿಸಬೇಕಿದೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಸೆಲೆಬ್ರಿಟಿ ಸೇರಿದಂತೆ ಒಟ್ಟು 17ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕೂಲಂಕುಷವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.