ಬೆಂಗಳೂರು,ಅ.17- ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ ರಾಜ್ಯಕ್ಕೆ ಬಾಕಿ ಇರುವ 478.46 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಅವುಗಳಲ್ಲಿ 161 ತಾಲ್ಲೂಕುಗಳಲ್ಲಿ ತೀವ್ರ ಬರವಿದ್ದು, 34 ತಾಲ್ಲೂಕುಗಳಲ್ಲಿ ಸಾಧಾರಣ ಪರಿಸ್ಥಿತಿ ಇದೆ. ಮನ್ರೇಗಾ ಯೋಜನೆಯ ಮೂಲ ಉದ್ದೇಶವೇ ಗ್ರಾಮೀಣ ಜಾಗದಲ್ಲಿ ದುಡಿಯುವ ಜನರಿಗೆ ಉದ್ಯೋಗ ಕಲ್ಪಿಸಿ ನಗರದತ್ತ ವಲಸೆ ಬರುವುದನ್ನು ತಪ್ಪಿಸಬಹುದಾಗಿದೆ.
ದೇಶದೊಂದಿಗೆ ಪಾಲುದಾರರಾಗಲು ಹೂಡಿಕೆದಾರರಿಗೆ ಮೋದಿ ಕರೆ
ಬರದ ಸನ್ನಿವೇಶದಲ್ಲಿ ಗ್ರಾಮೀಣ ಭಾಗದವರು ನಗರದತ್ತ ವಲಸೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತ್ರಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಆ.30ರಂದು ಅನುದಾನ ಬಳಕೆಯ ಪ್ರಮಾಣ ಪತ್ರವನ್ನು ಹಾಗೂ ಸೆ.22ರಂದು ವಾರ್ಷಿಕ ಲೆಕ್ಕಪತ್ರಗಳ ವರದಿಯನ್ನು ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಸೆಪ್ಟೆಂಬರ್ 24ರಂದು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿಗೆ ಸಂಬಂಧಿಸಿದಂತೆ 1.55 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಆ.29ರಿಂದಲೂ ಈವರೆಗೂ ಮನ್ರೇಗಾ ಯೋಜನೆಯಡಿ 478.46 ಕೋಟಿ ರೂ.ಗಳ ಬಾಕಿ ಇದ್ದು, ಅದನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.