Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-06-2024)

ನಿತ್ಯ ನೀತಿ : ಒಂದು ಹೂವು ಮತ್ತೊಂದು ಹೂವಿನೊಂದಿಗೆ ಸ್ಪರ್ಧೆಗಿಳಿಯುವುದಿಲ್ಲ. ಸುಂದರವಾಗಿ ಅರಳುವುದಷ್ಟೇ ಅವುಗಳ ಕೆಲಸ.ನಮ ವ್ಯಕ್ತಿತ್ವವೂ ಹಾಗೇ ಇರಬೇಕು.

ಪಂಚಾಂಗ : ಗುರುವಾರ , 20-06-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಅನುರಾಧಾ / ಯೋಗ: ಸಾಧ್ಯ / ಕರಣ: ಗರಜೆ

ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.48
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ವೃಷಭ: ಶತ್ರುಕಾಟದಿಂದ ಮುಕ್ತಿ ದೊರೆಯಲಿದೆ. ಪ್ರಭಾವಿಗಳೊಂದಿಗೆ ಸಂಪರ್ಕ ಬೆಳೆಸುವಿರಿ.
ಮಿಥುನ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.

ಕಟಕ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಒಳ್ಳೆಯದು.
ಸಿಂಹ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.
ಕನ್ಯಾ: ಕುಟುಂಬದ ಅಗತ್ಯ ಗಳನ್ನು ಪೂರೈಸುವುದರಲ್ಲೇ ಹೆಚ್ಚು ಸಮಯ ಕಳೆಯುವಿರಿ.

ತುಲಾ: ಹೊಸ ಹುದ್ದೆಯಲ್ಲಿ ಗೌರವ, ಸಂತೋಷ, ಹೊಸ ರೀತಿಯ ಅನುಭವ ಸಿಗಲಿದೆ.
ವೃಶ್ಚಿಕ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಒಳಿತು.
ಧನುಸ್ಸು: ಜವಾಬ್ದಾರಿಗಳನ್ನು ಪೂರೈಸಿ. ಖಂಡಿತವಾಗಿಯೂ ಉನ್ನತ ಮಟ್ಟಕ್ಕೆ ಏರುವಿರಿ.

ಮಕರ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.
ಕುಂಭ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆ ಒಳಗಾಗಬಹುದು.
ಮೀನ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.

RELATED ARTICLES

Latest News