Saturday, September 28, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-06-2024)

ನಿತ್ಯ ನೀತಿ : ಬದುಕಿನ ಸುಂದರ ಕ್ಷಣಗಳು ಮರಳಲಾರವು. ಆದರೆ, ಸುಮಧುರ ಬಾಂಧವ್ಯಗಳ ನೆನಪು ಮಾತ್ರ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ.

ಪಂಚಾಂಗ : ಭಾನುವಾರ, 23-06-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ /ಕೃಷ್ಣ ಪಕ್ಷ /ತಿಥಿ: ದ್ವಿತೀಯಾ / ನಕ್ಷತ್ರ: ಪೂರ್ವಾಷಾಢ / ಯೋಗ: ಬ್ರಹ್ಮ /ಕರಣ: ತೈತಿಲ

ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.49
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.

ಕಟಕ: ಹವಾಮಾನ ವೈಪರೀತ್ಯದಿಂದ ಆರೋಗ್ಯ ದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಉದ್ಯೋಗದಲ್ಲಿ ಬಡ್ತಿ ದೊರೆಯಲಿದ್ದು, ಶ್ರಮಕ್ಕೆ ತಕ್ಕ ಫಲ ಸಿಗಲಿದೆ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.

ಮಕರ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಕುಂಭ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
ಮೀನ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.

RELATED ARTICLES

Latest News