ಥಾಣೆ,ಜೂ.23- ವಿವಾಹಿತ ಮಹಿಳಾ ಕಾನ್ಸ್ಟೇಬಲ್ ಅವರ ಮೇಲೆ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ನವಿ ಮುಂಬೈ ಟೌನ್ಶಿಪ್ನಲ್ಲಿ ವಿವಾಹಿತ ಮಹಿಳಾ ಕಾನ್ಸ್ಟೆಬಲ್ ಮೇಲೆ ಅತ್ಯಾಚಾರ ಎಸಗಿ ಕಿರುಕುಳ ನೀಡಿದ ಆರೋಪದ ಮೇಲೆ 32 ವರ್ಷದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಽಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಎಸ್ಐ ಕಳೆದ 2020 ಮತ್ತು ಜುಲೈ 2022 ರ ನಡುವೆ ಸಂಪಾದ ಪ್ರದೇಶದಲ್ಲಿ ಈ ಅಪರಾಧ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಆರೋಪಿ 26 ವರ್ಷದ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಅನೇಕ ಸಂದರ್ಭಗಳಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆತ ಸಂತ್ರಸ್ತೆಯಿಂದ ಕಾಲಕಾಲಕ್ಕೆ ಯಾವುದೋ ನೆಪದಲ್ಲಿ 19 ಲಕ್ಷ ಪಡೆದು 14.61 ಲಕ್ಷ ಮಾತ್ರ ಹಿಂದಿರುಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯು ಮಹಿಳೆಗೆ ಪತಿಯನ್ನು ತೊರೆಯುವಂತೆ ಒತ್ತಾಯಿಸಿದ್ದ ಒಂದು ವೇಳೆ ಅದಕ್ಕೆ ಸಮ್ಮತಿಸದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂಪಾದ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಮೊದಲಿಗೆ ನೆರೆಯ ಮುಂಬೈನ ಪಂತ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 376(2)(ಎನ್) (ಪುನರಾವರ್ತಿತ ಅತ್ಯಾಚಾರ) ಅಡಿಯಲ್ಲಿ ಆರೋಪಿಗಳ ವಿರುದ್ಧ ಶೂನ್ಯ ಎಫ್ ಐ ಆರ್ ದಾಖಲಿಸಲಾಗಿದೆ.
ಶನಿವಾರ ಪ್ರಕರಣ ದಾಖಲಿಸಿಕೊಂಡ ಸಂಪದ ಪೊಲೀಸರಿಗೆ ಹೆಚ್ಚಿನ ತನಿಖೆಗಾಗಿ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು. ಘಟನೆಯ ಸ್ಥಳ ಅಥವಾ ಅಽಕಾರ ವ್ಯಾಪ್ತಿಯನ್ನು ಲೆಕ್ಕಿಸದೆ ಯಾವುದೇ ಪೊಲೀಸ್ ಠಾಣೆಯಲ್ಲಿ ಶೂನ್ಯ ಎಫ್ ಐಆರ್ ದಾಖಲಿಸಬಹುದು ಮತ್ತು ನಂತರ ಸೂಕ್ತ ಪೊಲೀಸ್ ಠಾಣೆಗೆ ವರ್ಗಾಯಿಸಬಹುದು.