ಬರಿಪಾಡಾ,ಅ.18- ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಡಿಶಾದ ಮಯೂರ್‍ಭಂಜ್ ಜಿಲ್ಲೆಯ ಜಮ್ಡಾ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅದೇ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸಹಾಯಕ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮತ್ತು ಗೃಹರಕ್ಷಕರಾಗಿದ್ದಾರೆ ಎಂದು ಜಾಮ್ಡಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಮಿನಾತಿ ನಾಯ್ಕ್ ತಿಳಿಸಿದ್ದಾರೆ.
ತನ್ನ ಮನೆಯಲ್ಲಿ ಮನೆಕೆಲಸಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಎಎಸ್‍ಐ ಅವರನ್ನು ಬಂಧಿಸಲಾಗಿದೆ. ಜಾರ್ಖಂಡ್‍ನ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗೃಹರಕ್ಷಕನನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಛತ್ತೀಸ್‍ಗಢದಲ್ಲಿ 5.5 ಕೋಟಿ ಮೌಲ್ಯದ ನಗದು ಮತ್ತು ಇತರ ವಸ್ತುಗಳ ವಶ
ಇಬ್ಬರನ್ನೂ ಫೋಕ್ಸೋ ಅಡಿಯಲ್ಲಿ ಬಂಧಿಸಲಾಗಿದ್ದು, ಇಬ್ಬರನ್ನು ಕೃತ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ವ್ಯವಹರಿಸುತ್ತಿರುವ ನ್ಯಾಯಾಲಯಕ್ಕೆ ರವಾನಿಸಲಾಗಿದೆ. ಎಎಸ್‍ಐ ತನ್ನ ಹೆಂಡತಿಯ ಮರಣದ ನಂತರ ತನ್ನ ಮೂವರು ಮಕ್ಕಳನ್ನು ನೋಡಿಕೊಳ್ಳಲು ಅಪ್ರಾಪ್ತ ಬಾಲಕಿಯನ್ನು ನೇಮಿಸಿಕೊಂಡಿದ್ದು, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ.
ಈ ಕುರಿತಂತೆ ಬಾಲಕಿಯ ಚಿಕ್ಕಮ್ಮ ನೀಡಿದ ದೂರಿನ ಆಧಾರದ ಮೇಲೆ ಆತನನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡ ಪೊಲೀಸರು ಎಎಸ್‍ಐನನ್ನು ಬಂಧಿಸಿದ್ದಾರೆ. ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.