ನವದೆಹಲಿ,ಜೂ.26- 18ನೇ ಲೋಕಸಭೆ ಸ್ಪೀಕರ್ ಆಗಿ ಆಯ್ಕೆಯಾದ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಓಂ ಬಿರ್ಲಾ ಅವರ ರಾಜಕೀಯದ ಕೇಂದ್ರಬಿಂದು ಅಂದರೆ ಅದು ಸಮಾಜಸೇವೆ. ಕಳೆದ ಅವಧಿಯಲ್ಲಿ ಸ್ಪೀಕರ್ ಆಗಿದ್ದ ಬಿರ್ಲಾ ಅವರ ಅನುಭವವು ದೇಶಕ್ಕೆ ಮತ್ತಷ್ಟು ಮಾರ್ಗದರ್ಶನ ನೀಡಲು ಸಹಾಯ ಮಾಡುತ್ತದೆ ಎಂದಿದ್ದಾರೆ.
2001ರಲ್ಲಿ ಗುಜರಾತಿನ ಕಚ್‌ನಲ್ಲಿ ಸಂಭವಿಸಿದ ಭೂಕಂಪದ ಸಂದರ್ಭ ಸಾವಿರಾರು ಜನರ ಸಾವುನೋವು ಸಂಭವಿಸಿದಾಗ ಓಂಬಿರ್ಲಾ ಅವರು 100 ಮಂದಿ ಸ್ವಯಂ ಸೇವಕರ ತಂಡಗಳನ್ನು ಕಟ್ಟಿಕೊಂಡು ತೊಂದರೆಗೆ ಸಿಲುಕಿದ ಜನರಿಗೆ ಸಹಾಯ ಮಾಡಿದ ರೀತಿ ಅತ್ಯಮೂಲ್ಯವಾದದ್ದು. ರಾಜಸ್ಥಾನದ ಕೋಟಾದಲ್ಲಿ ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದೆಂದು ಇಂದಿಗೂ ಶ್ರಮಿಸುತ್ತಿದ್ದಾರೆ ಎಂದು ಅವರು ನೆನಪಿಸಿಕೊಂಡರು.
ನಿಯಮ ಉಲ್ಲಂಘಿಸಿದರೆ ನಮ ಪಕ್ಷದ ಸದಸ್ಯರೂ ಸೇರಿದಂತೆ ಯಾ ರೇ ಆಗಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಮೋದಿ ಸಲಹೆ ಮಾಡಿದರು. ಇದೇ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಇದೇ ವೇಳೆ, ಪ್ರತಿಪಕ್ಷಗಳು ಭಾರತದ ಧ್ವನಿ ಆಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ನೂತನ ಸ್ಪೀಕರ್‌ಗೆ ಮನವಿ ಮಾಡಿದರು.
ಈ ಬಾರಿ ಇಂಡಿಯಾ ಕೂಟ ದೇಶದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.ಇಂದು ಧ್ವನಿ ಮತದ ಮೂಲಕ ಆಯ್ಕೆ ಆಗುವ ಮೂಲಕ 2ನೇ ಬಾರಿ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಮುಂದುವರೆಯಲಿದ್ದಾರೆ. 1976ರ ಬಳಿಕ ಇದೇ ಮೊದಲ ಬಾರಿಗೆ ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿದೆ. ಇಂಡಿಯಾ ಒಕ್ಕೂಟದಿಂದ ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಪ್ರತಿ ಸ್ಪರ್ಧಿಯಾಗಿದ್ದ ಕೆ.ಸುರೇಶ್ ವಿರುದ್ಧ ಓಂ ಬಿರ್ಲಾ ಗೆಲುವು ಸಾಧಿಸಿದ್ದಾರೆ.