Sunday, October 6, 2024
Homeರಾಷ್ಟ್ರೀಯ | Nationalಅಯೋಧ್ಯೆಯಲ್ಲಿ 650 ಕೋಟಿ ರೂ. ವೆಚ್ಚದಲ್ಲಿ ದೇವಾಲಯಗಳ ಮ್ಯೂಸಿಯಂ ನಿರ್ಮಿಸಲಿದೆ ಟಾಟಾ ಸನ್ಸ್

ಅಯೋಧ್ಯೆಯಲ್ಲಿ 650 ಕೋಟಿ ರೂ. ವೆಚ್ಚದಲ್ಲಿ ದೇವಾಲಯಗಳ ಮ್ಯೂಸಿಯಂ ನಿರ್ಮಿಸಲಿದೆ ಟಾಟಾ ಸನ್ಸ್

ಲಕ್ನೋ, ಜೂ.27- ವಿಶ್ವ ಪ್ರಸಿದ್ಧ ರಾಮ ಮಂದಿರುವ ಇರುವ ಅಯೋಧ್ಯೆಯಲ್ಲಿ 650 ಕೋಟಿ ರೂ.ಗಳ ವೆಚ್ಚದಲ್ಲಿ ದೇವಾಲಯಗಳ ವಸ್ತುಸಂಗ್ರಹಾಲಯ ನಿರ್ಮಿಸುವ ಟಾಟಾ ಸನ್ಸ್ ಸಂಸ್ಥೆಯ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಅನುಮೋದನೆ ನೀಡಿದೆ.

ಸುಪ್ತ ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾಪಕ್ಕೂ ಸಂಪುಟ ಅನುಮೋದನೆ ಪಡೆದಿದೆ. ಇದಲ್ಲದೇ ದೇವಾಲಯದ ಪಟ್ಟಣದಲ್ಲಿ 100 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಟಾಟಾ ಸನ್‌್ಸನ ಮತ್ತೊಂದು ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸುವ ಮೂಲಕ ಲಕ್ನೋ, ಪ್ರಯಾಗ್ರಾಜ್‌ ಮತ್ತು ಕಪಿಲವಾಸ್ತುಗಳಲ್ಲಿ ಹೆಲಿಕಾಪ್ಟರ್‌ ಸೇವೆಗಳನ್ನು ಪ್ರಾರಂಭಿಸುವುದು ಸೇರಿದಂತೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಇತರ ಪ್ರಸ್ತಾಪಗಳಾಗಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಯುಪಿ ಪ್ರವಾಸೋದ್ಯಮ ಸಚಿವ ಜೈವಿರ್‌ ಸಿಂಗ್‌ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಟಾಟಾ ಸನ್‌್ಸ ತನ್ನ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿಯ ಅಡಿಯಲ್ಲಿ 650 ಕೋಟಿ ರೂಪಾಯಿ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಮೂಲಕ ಯೋಜನೆಯನ್ನು ಪ್ರಸ್ತಾಪಿಸಿದೆ ಎಂದು ಹೇಳಿದರು.

ಈ ಅತ್ಯಾಧುನಿಕ ವಸ್ತುಸಂಗ್ರಹಾಲಯವು ಅಂತಾರಾಷ್ಟ್ರೀಯ ಗುಣಮಟ್ಟವನ್ನು ಪೂರೈಸುತ್ತದೆ. ಭಾರತದ ಪ್ರಸಿದ್ಧ ದೇವಾಲಯಗಳ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಪ್ರದರ್ಶಿಸುತ್ತದೆ ಎಂದರು.

ಟಾಟಾ ಸನ್‌್ಸ ಕೇಂದ್ರ ಸರ್ಕಾರದ ಮೂಲಕ ಈ ಯೋಜನೆಗೆ ಪ್ರಸ್ತಾಪ ಇಟ್ಟಿತ್ತು. ತನ್ನ ಕಾರ್ಪೊರೇಟ್‌ ಸಾಮಾಜಿಕ ಜವಾಬ್ದಾರಿ ನಿಧಿಯಡಿ 650 ಕೋಟಿ ರೂ.ಗಳ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಮುಂದಾಗಿತ್ತು. ದೇವಾಲಯದ ಪಟ್ಟಣದಲ್ಲಿ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ಹೆಚ್ಚುವರಿ 100 ಕೋಟಿ ರೂ.ಗಳ ಕಂಪನಿಯ ಪ್ರಸ್ತಾಪವನ್ನು ಕ್ಯಾಬಿನೆಟ್‌ ಅನುಮೋದಿಸಿದೆ ಎಂದು ಅವರು ಹೇಳಿದರು.

ಲಕ್ನೋದ ಕೋಥಿ ರೋಶನ್‌ ದುಲ್ಹಾ, ಮಥುರಾದ ಬರ್ಸಾನಾ ಜಲ್‌ ಮಹಲ್‌ ಮತ್ತು ಕಾನ್ಪುರದ ಶುಕ್ಲಾ ತಲಾಬ್‌ (ಕೊಳ) ಈ ಮೂರು ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಪ್ರವಾಸೋದ್ಯಮ ಫೆಲೋಶಿಪ್‌ ಕಾರ್ಯಕ್ರಮದಡಿ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

ವಸ್ತುಸಂಗ್ರಹಾಲಯದ ಕುರಿತು ಕಳೆದ ವರ್ಷವೇ ಚಿಂತನೆ ನಡೆಸಲಾಗಿದ್ದು, ಸಿಎಂ ಆದಿತ್ಯನಾಥ್‌ ಹಾಗೂ ಹಿರಿಯ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಈ ಕುರಿತು ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ದೇವಾಲಯದ ವಸ್ತುಸಂಗ್ರಹಾಲಯದ ಕಲ್ಪನೆಯನ್ನು ಮೋದಿಯವರು ಇಷ್ಟಪಟ್ಟಿದ್ದಾರೆ. ನಂತರ ಈ ಕುರಿತು ವಿವರವಾಗಿ ಚರ್ಚಿಸಲಾಗಿದೆ.

RELATED ARTICLES

Latest News