ಮಥುರಾ, ಜು.1 – ಮಥುರಾ ಜಿಲ್ಲೆಯ ಜನನಿಬಿಡ ಪ್ರದೇಶದಲ್ಲಿ ಓವರ್ಹೆಡ್ ವಾಟರ್ ಟ್ಯಾಂಕ್ ಕುಸಿದು ಬಿದ್ದು ,ಅವಶೇಷಗಳಡಿ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿ,11 ಜನರು ಗಾಯಗೊಂಡಿದ್ದಾರೆ. ಮೃತರನ್ನು ಸುಂದರಿ (65) ಮತ್ತು ಸರಿತಾ (27) ಎಂದು ಗುರುತಿಸಲಾಗಿದೆ.
ಗಾಯಗೊಂಡವರಲ್ಲಿ ನವಾಬ್ (35) ಎಂಬಾತನ ಸ್ಥಿತಿ ಗಂಭೀರವಾಗಿರುವುದರಿಂದ ಆತನನ್ನು ಆಗ್ರಾದ ಎಸ್ಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಆವಾಸ್ ವಿಕಾಸ್ ಪರಿಷತ್ನಿಂದ ಕೃಷ್ಣ ವಿಹಾರ್ ಕಾಲೋನಿಯಲ್ಲಿ ನಿರ್ಮಿಸಲಾಗಿದ್ದ ಓವರ್ಹೆಡ್ ವಾಟರ್ ಟ್ಯಾಂಕ್ ಏಕಾಏಕಿ ಕುಸಿದಿದ್ದು ಅದರ ಸಮೀಪವಿದ್ದ ಹಲವರು ಅವಶೇಷದಡಿ ಸಿಲುಕಿದ್ದಾರೆ ಎಂದು ಜಿಲ್ಲಾ ವ್ಯಾಜಿಸೆ್ಟ್ರೕಟ್ ಶೈಲೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ಸೇವೆ ಮತ್ತು ಪೊಲೀಸ್ ಸಿಬ್ಬಂದಿಯಲ್ಲದೆ, ಕಂದಾಯ, ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆರೋಗ್ಯ ಇಲಾಖೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎ್) ತಂಡಗಳನ್ನು ಸಹ ಕರೆಸಲಾಗಿದೆ ಎಂದು ಹೇಳಿದರು.
ಪ್ರಸ್ತುತ ಇಬ್ಬರು ಸಾವನ್ನಪ್ಪಿದ್ದಾರೆ, ಗಾಯಗೊಂಡಿರುವ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅವಶೇಷಗಳನ್ನು ತೆಗೆಯುವ ಕಾರ್ಯ ಇನ್ನೂ ನಡೆಯುತ್ತಿದ್ದು, ಇನ್ನೂ ಹಲವರು ಅದರಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಿದರು.
ನೀರಿನ ಟ್ಯಾಂಕ್ ನಿರ್ಮಾಣವು 2021 ರಲ್ಲಿ ಪೂರ್ಣಗೊಂಡಿತು ಮತ್ತು ಕೇವಲ ಮೂರು ವರ್ಷಗಳಲ್ಲಿ ಅದರ ಕುಸಿತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು ಹೇಳಿದರು. ಗಂಗಾಜಲ ಕುಡಿಯುವ ನೀರಿನ ಯೋಜನೆಯಡಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಜಲ ನಿಗಮದಿಂದ ಟ್ಯಾಂಕ್ ನಿರ್ಮಿಸಲಾಗಿತ್ತು