Tuesday, May 20, 2025
Homeರಾಜ್ಯಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್

ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್

ಬೆಂಗಳೂರು,ಜು.1- ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಚರ್ಚೆ ಮುನ್ನಲೆಗೆ ಬಂದಿದ್ದು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೆಸರು ಮುಂಚೂಣಿಯಲ್ಲಿದೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಸದ್ಯದಲ್ಲ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಮುಖ ರಾಗಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಚುನಾಯಿತರಾಗಿ ಕೇಂದ್ರ ಸಚಿವರಾಗುತ್ತಿದ್ದಂತೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ ವಿಚಾರ ಚರ್ಚೆಗೆ ಬಂದಿದೆ.

ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್‌, ಶಾಸಕ ಸಿ.ಬಿ.ಸುರೇಶ್‌ ಬಾಬು ಅವರ ಹೆಸರು ಚಲಾವಣೆಗೆ ಬಂದಿದೆ. ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸು ವುದಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ನಿಖಿಲ್‌ಕುಮಾರಸ್ವಾಮಿ ಈಗಾಗಲೇ ಸ್ಪಷ್ಟಪಡಿಸಿ ದ್ದಾರೆ. ಹೀಗಾಗಿ ನಿಖಿಲ್‌ಕುಮಾರ ಸ್ವಾಮಿ ರಾಜ್ಯಾಧ್ಯಕ್ಷರಾಗಿ ಬಡ್ತಿ ಪಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.

ಜಿಟಿಡಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ: ಕುಮಾರಸ್ವಾಮಿ ಅವರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸ್ಥಾನ ತೆರವಾಗಿದೆ.

ಆ ಸ್ಥಾನಕ್ಕೆ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷರಾಗಿರುವ ಹಿರಿಯ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ದೊರೆಯುವ ಸಾಧ್ಯತೆಗಳಿವೆ. ಈ ಬಗ್ಗೆ ಆಂತರಿಕ ವಲಯದಲ್ಲಿ ಚರ್ಚೆ ನಡೆದಿದೆ.

ಮಳೆಗಾಲದ ಅಧಿವೇಶನ ಆರಂಭ ವಾಗುವ ವೇಳೆಗೆ ಹೊಸ ಜೆಡಿಎಸ್‌‍ನ ಶಾಸಕಾಂಗ ಪಕ್ಷದ ನಾಯಕ ನೇಮಕವಾಗಲಿದ್ದು ಜಿ.ಟಿ.ದೇವೇಗೌಡರು ಆ ಸ್ಥಾನ ಪಡೆಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

RELATED ARTICLES

Latest News