ಬೆಂಗಳೂರು,ಜು.5- ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂ. ಮೌಲ್ಯದ 14 ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನು ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವರು ಕಡತಗಳನ್ನು ಬೆಂಗಳೂರಿಗೆ ತಂದಿದ್ದಾರೆ ಎಂದು ವಿಧಾನಸ ಭೆಯ ಪ್ರತಿಪಕ್ಷದ ನಾಯಕ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದಲೇ ನಗರಾಭಿವೃದ್ಧಿ ಸಚಿವ ಭೈರತಿ ಸಚಿವ ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಈ ಕೂಡಲೇ ಸಂಬಂಧಪಟ್ಟ ಕಡತಗಳನ್ನು ಬಹಿರಂಗ ಮಾಡಿ ಸಾರ್ವಜನಿಕರ ಮುಂದಿಡಬೇಕು ಎಂದು ಸಿದ್ದರಾಮಯ್ಯ ಅವರನ್ನು ಅಶೋಕ್ ಒತ್ತಾಯಿಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾದ 4,000 ಕೋಟಿ ಮೌಲ್ಯದ ಮುಡಾ ಹಗರಣದಲ್ಲಿ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.