ಬೆಂಗಳೂರು,ಜು.7-ಕಾವೇರಿ ಜಲಾಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಬೀಳುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಮತ್ತು ಕೃಷ್ಣರಾಜ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ.
ಕೃಷ್ಣರಾಜ ಜಲಾಶಯಕ್ಕೆ 11,027 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 124.80 ಅಡಿ ಗರಿಷ್ಠ ಮಟ್ಟದ ಜಲಾಶಯ ಈಗ 102 ಅಡಿ ಮಟ್ಟಕ್ಕೆ ತಲುಪಿದೆ. ಒಳಹರಿವಿನ ಪ್ರಮಾಣ 562 ಕ್ಯೂಸೆಕ್ ಇದೆ. 49.42 ಅಡಿ ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 24.417 ಅಡಿ ಟಿಎಂಸಿ ನೀರು ಸಂಗ್ರಹವಾಗಿದೆ.
ಮಳೆ ಮತ್ತಷ್ಟು ಜೋರಾದರೆ ಡ್ಯಾಮ್‌ನಲ್ಲಿ ನೀರು ಸಂಗ್ರಹ ಹೆಚ್ಚಾಗಲಿದೆ. ದಿನೇ ದಿನೇ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಜಲಾಯನ ಭಾಗದ ರೈತರಲ್ಲಿ ಸಂತಸ ಮನೆ ಮಾಡಿದೆ.
ಅದೇ ರೀತಿ ಕಬಿನಿ ಜಲಾಶಯಕ್ಕೂ ನೀರಿನ ಮಟ್ಟ ಹೆಚ್ಚಾಗಿದೆ. ಜಲಾಶಯ ಭರ್ತಿಯಾಗಲು ಕೇವಲ 2 ಅಡಿ ಮಾತ್ರ ಬಾಕಿ ಇದೆ. 5,039 ಕ್ಯೂಸೆಕ್ ಒಳಹರಿವಿನ ಪ್ರಮಾಣ ಇದೆ. 3250 ಕ್ಯೂಸೆಕ್ ಹೊರಹರಿವಿನ ಪ್ರಮಾಣ ಇದೆ. ಈ ಭಾಗದಲ್ಲಿ ಮಳೆ ಮುಂದುವರೆದಿದ್ದು, ಸದ್ಯದಲ್ಲೇ ಜಲಾಶಯ ಭರ್ತಿಯಾಗಲಿದೆ.