ನವದೆಹಲಿ,ಜು.9- ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿಗಳ ಸಾವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಕಂಬನಿ ಮಿಡಿದಿದ್ದಾರೆ.
ಕಥುವಾ (ಜೆಕೆ)ಯ ಬದ್ನೋಟಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ನಮ ಐವರು ವೀರ ಭಾರತೀಯ ಸೇನೆಯ ಯೋಧರನ್ನು ಕಳೆದುಕೊಂಡಿದ್ದಕ್ಕಾಗಿ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ರಕ್ಷಣಾ ಸಚಿವರು ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ನನ್ನ ಸಂತಾಪಗಳು, ಈ ಕಷ್ಟದ ಸಮಯದಲ್ಲಿ ರಾಷ್ಟ್ರವು ಅವರೊಂದಿಗೆ ದೃಢವಾಗಿ ನಿಂತಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ನಮ ಸೈನಿಕರು ಈ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ತರಲು ನಿರ್ಧರಿಸಿದ್ದಾರೆ.
ಈ ಭೀಕರ ಭಯೋತ್ಪಾದನಾ ದಾಳಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಿಂಗ್ ಹೇಳಿದರು. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸೈನಿಕರು ಈ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ತರಲು ನಿರ್ಧರಿಸಿದ್ದಾರೆ ಎಂದಿದ್ದಾರೆ.
ಕಥುವಾದಲ್ಲಿನ ಬದ್ನೋಟಾ ಪ್ರದೇಶದಲ್ಲಿ ಸೋಮವಾರ ಭಾರೀ ಶಸಸಜ್ಜಿತ ಭಯೋತ್ಪಾದಕರ ಗುಂಪು ಗಸ್ತು ತಿರುಗುತ್ತಿದ್ದ ಪಾರ್ಟಿಯ ಮೇಲೆ ಹೊಂಚುದಾಳಿ ನಡೆಸಿದಾಗ ಐವರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.