ಉನ್ನಾವೊ (ಯುಪಿ), ಜು 10 -ಇಲ್ಲಿನ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಬೆಳಿಗ್ಗೆ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ವೇಗವಾಗಿ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದಾರೆ.
ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಜೋಜಿಕೋಟ್ ಗ್ರಾಮದ ಬಳಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಜಿಲ್ಲಾ ವ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಮಾತನಾಡಿ, ಬಿಹಾರದ ಮೋತಿಹಾರಿಯಿಂದ ದೆಹಲಿಗೆ ತೆರಳುತ್ತಿದ್ದ ಬಸ್ ವೇಗವಾಗಿ ಬಂದು ಹಾಲಿನ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.ಈ ಭೀಕರ ದುರಂತದಲ್ಲಿ 18 ಮಂದಿ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದರಲ್ಲಿ 14 ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಲಕ್ನೋದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಸ್ ಬಿ ಶಿರಾಡ್ಕರ್ ತಿಳಿಸಿದ್ದಾರೆ.ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಹಾಲಿನ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ ಮತ್ತು ಮೃತರಲ್ಲಿ ಎರಡು ವಾಹನಗಳ ಚಾಲಕರು ಸೇರಿದ್ದಾರೆ ಸಂತ್ರಸ್ತರನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಕ್ರೇನ್ ಸಹಾಯದಿಂದ ಅಪಘಾತಗೊಂಡ ವಾಹನಗಳನ್ನರಸ್ತೆ ಪಕ್ಕಕ್ಕೆ ಸರಿಸಲಾಗಿದೆ.ತನಿಖೆ ಮುಂದುವರೆದಿದೆ.ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅಪಘಾತದಲ್ಲಿ ಜೀವಹಾನಿ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆಜಿಲ್ಲಾಡಳಿತದ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯವನ್ನು ತ್ವರಿತಗೊಳಿದ್ದಾರೆ.