Monday, November 25, 2024
Homeಬೆಂಗಳೂರುವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಪೊಲೀಸರ ಕಾರ್ಯಾಚರಣೆ, 50,500ರೂ. ದಂಡ ಸಂಗ್ರಹ

ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಪೊಲೀಸರ ಕಾರ್ಯಾಚರಣೆ, 50,500ರೂ. ದಂಡ ಸಂಗ್ರಹ

ಬೆಂಗಳೂರು,ಜು.12- ಪೂರ್ವ ವಿಭಾಗದ ಸಂಚಾರಿ ಪೊಲೀಸರು ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವ ಹಾಗೂ ಕರ್ಕಶ ಶಬ್ದ ಉಂಟುಮಾಡುತ್ತಿದ್ದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 50,500 ರೂ. ದಂಡ ಸಂಗ್ರಹಿಸಿದ್ದಾರೆ.

ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡುತ್ತಿದ್ದ ವಾಟರ್ ಟ್ಯಾಂಕರ್ ಚಾಲಕರುಗಳ ವಿರುದ್ಧ 55 ಪ್ರಕರಣಗಳು ಹಾಗೂ ಕರ್ಕಶ ಶಬ್ದ ಮಾಡುವ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ 46 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಸುಮಾರು 259 ವಾಹನಗಳನ್ನು ತಪಾಸಣೆ ಮಾಡಿದ ಸಂಚಾರಿ ಪೊಲೀಸರು 100 ಕ್ಕಿಂತಲೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿಕೊಂಡು ದಂಡ ಸಂಗ್ರಹಿಸಿದ್ದು, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಮುಂದಿನ ದಿನಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಉಪಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News