Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-07-2024)

ನಿತ್ಯ ನೀತಿ : ನಾವು ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದರೆ ಹೃದಯವಂತರು ಚಪ್ಪಾಳೆ ತಟ್ಟುತ್ತಾರೆ. ಹೃದಯ ಹೀನರು ಟೀಕಿಸುತ್ತಾರೆ. ಆದರೆ, ಒಳ್ಳೆಯ ಕಾರ್ಯದ ಫಲಿತಾಂಶ ಹೇಗಿರುತ್ತದೆ ಅಂದರೆ ಚಪ್ಪಾಳೆ ತಟ್ಟಿದವರೇ ಟೀಕಾಕಾರರ ಬಾಯಿ ಮುಚ್ಚಿಸುತ್ತಾರೆ. ನಾವು ಟೀಕೆಗೆ ಉತ್ತರಿಸಬೇಕಾಗಿಲ್ಲ.

ಪಂಚಾಂಗ : ಶನಿವಾರ , 13-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಹಸ್ತ / ಯೋಗ: ಶಿವ / ಕರಣ: ವಿಷ್ಠಿ

ಸೂರ್ಯೋದಯ – ಬೆ.06.01
ಸೂರ್ಯಾಸ್ತ – 06.50
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ವೃಷಭ: ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆ ಯಾಗುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ಮಿಥುನ: ಪ್ರಿಂಟಿಂಗ್ ವ್ಯಾಪಾರಿಗಳಿಗಗೆ ನಿರೀಕ್ಷಿತ ಆದಾಯ ಸಿಗಲಿದೆ.

ಕಟಕ: ಸಹೋದರರು ಆರ್ಥಿಕವಾಗಿ ಸಹಾಯ ಮಾಡುವರು.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕನ್ಯಾ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ.
ವೃಶ್ಚಿಕ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಧನುಸ್ಸು: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.

ಮಕರ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.

RELATED ARTICLES

Latest News