ನವದೆಹಲಿ, ಜು.13- ವಿವಿಧ ಸಂದರ್ಭಗಳಲ್ಲಿ ಪೊಲೀಸರು, ಐಎಎಸ್ ಮತ್ತು ಐಪಿಎಸ್‌ನಂತಹ ಅಖಿಲ ಭಾರತ ಸೇವೆಗಳ ಅಧಿಕಾರಿಗಳ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಕಾನೂನು ಕ್ರಮಕ್ಕೆ ಅನುಮತಿ ನೀಡಲು ಜಮ್ಮು ಕಾಶೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ)ಗೆ ಕೇಂದ್ರವು ಹೆಚ್ಚಿನ ಅಧಿಕಾರ ನೀಡಿದೆ.
ಅಡ್ವೊಕೇಟ್ ಜನರಲ್ ಮತ್ತು ಇತರ ಕಾನೂನು ಅಧಿಕಾರಿಗಳ ನೇಮಕಾತಿಯ ಬಗ್ಗೆ ನಿರ್ಧಾರ, ಭ್ರಷ್ಟಾಚಾರ ವಿರೋಧಿ ಬ್ಯೂರೋಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ನೀಡಲಾಗಿದೆ.
ಹಿಂದಿನ ಜಮುಕಾಶೀರ ರಾಜ್ಯವನ್ನು ಜಮುಕಾಶೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಜಾರಿಗೆ ತರಲಾದ ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ರ ಅಡಿಯಲ್ಲಿ ಹೊರಡಿಸಲಾದ ನಿಯಮಗಳನ್ನು ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಗೃಹ ಸಚಿವಾಲಯ ಈ ಅಧಿಕಾರಗಳನ್ನು ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಕಾಯ್ದೆಯಡಿ ಲೆಫ್ಟಿನೆಂಟ್ ಗವರ್ನರ್ ಅವರ ವಿವೇಚನೆಯನ್ನು ಚಲಾಯಿಸಲು ಪೊಲೀಸ್, ಸಾರ್ವಜನಿಕ ಆದೇಶ, ಅಖಿಲ ಭಾರತ ಸೇವೆ ಮತ್ತು ಭ್ರಷ್ಟಾಚಾರ-ವಿರೋಧಿ ಬ್ಯೂರೋೞಗಳಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯ ಹಿಂದಿನ ಒಪ್ಪಿಗೆ ಅಗತ್ಯವಿರುವ ಯಾವುದೇ ಪ್ರಸ್ತಾಪವನ್ನು ಒಪ್ಪಲಾಗುವುದಿಲ್ಲ ಅಥವಾ ತಿರಸ್ಕರಿಸಲಾಗುವುದಿಲ್ಲ.
ಅಲ್ಲದೆ ಕೆಲವು ಪ್ರಮುಖ ನಿಯಮಗಳಲ್ಲಿ ನಿಯಮಗಳಲ್ಲಿ, ನಿಯಮ 42ರ ನಂತರ ನಿಯಮಗಳನ್ನು ಸೇರಿಸಲಾಗುವುದು ಎಂದು ಸಚಿವಾಲಯ ಹೇಳಿದೆ.ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಮೂಲಕ ಲೆಫ್ಟಿನೆಂಟ್ ಗವರ್ನರ್ ಅನುಮೋದನೆಗಾಗಿ, ಕಾನೂನು, ನ್ಯಾಯ ಮತ್ತು ಸಂಸದೀಯ ವ್‌ಯವಹಾರಗಳ ಇಲಾಖೆಯು ಅಡ್ವೊಕೇಟ್-ಜನರಲ್‌ಗೆ ನ್ಯಾಯಾಲಯದ ಕಲಾಪಗಳಲ್ಲಿ ಸಹಾಯ ಮಾಡಲು ಅಡ್ವೊಕೇಟ್-ಜನರಲ್ ಮತ್ತು ಇತರ ಕಾನೂನು ಅಧಿಕಾರಿಗಳ ನೇಮಕಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತದೆ.
ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಅಥವಾ ಮೇಲನವಿ ಸಲ್ಲಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿ ಮೂಲಕ ಎಲ್-ಜಿ ಮುಂದೆ ಇಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಧಾನ ನಿಯಮಗಳಲ್ಲಿ ನಿಯಮ 43ರಲ್ಲಿ ಮೂರನೇ ನಿಬಂಧನೆಯ ನಂತರ, ಗೃಹ ಸಚಿವಾಲಯವು ಕೆಲವು ನಿಬಂಧನೆಗಳನ್ನು ಸೇರ್ಪಡೆ ಮಾಡಲಿದೆ.
ಮುಖ್ಯವಾಗಿ ಕಾರಾಗೃಹಗಳು, ಪ್ರಾಸಿಕ್ಯೂಷನ್ ನಿರ್ದೇಶನಾಲಯ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ, ಮುಖ್ಯ ಕಾರ್ಯದರ್ಶಿಯ ಮೂಲಕ ಆಡಳಿತಾತ್ಮಕ ಕಾರ್ಯದರ್ಶಿ, ಗೃಹ ಇಲಾಖೆಯಿಂದ ವಿಷಯಗಳನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸಲ್ಲಿಸಬೇಕು ಎಂದು ಅದು ಹೇಳಿದೆ.
ಅಖಿಲ ಭಾರತ ಸೇವಾ ಅಧಿಕಾರಿಗಳ ಆಡಳಿತ ಕಾರ್ಯದರ್ಶಿಗಳು ಮತ್ತು ಕೇಡರ್ ಹುದ್ದೆಗಳ ಪೋಸ್ಟಿಂಗ್ ಮತ್ತು ವರ್ಗಾವಣೆಗೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ, ಆಡಳಿತ ಕಾರ್ಯದರ್ಶಿ, ಸಾಮಾನ್ಯ ಆಡಳಿತ ಇಲಾಖೆಯು ಮುಖ್ಯ ಕಾರ್ಯದರ್ಶಿ ಮೂಲಕ ಎಲ್-ಜಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಸಚಿವಾಲಯ ಹೇಳಿದೆ.